ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರ ಬೆಂಗಾವಲು ವಾಹನದ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಬಾಪೂಜಿನಗರದಲ್ಲಿರುವ ಬಾಡಿಗೆ ಮನೆಯಲ್ಲಿ 34 ವರ್ಷದ ಶರಣಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಶರಣಪ್ಪ ಮತ್ತು ಶೈಲಶ್ರೀ ಅವರು ಈ ಮನೆಯಲ್ಲಿ ತಮ್ಮ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು.
ಶರಣಪ್ಪ ಅವರ ಪತ್ನಿ ಶೈಲಶ್ರೀ ಅವರು ಮಾಗಡಿ ರಸ್ತೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಶರಣಪ್ಪ ಅವರು ಮೂಲತಃ ಕಲ್ಬುರ್ಗಿ ಜಿಲ್ಲೆಯವರಾಗಿದ್ದು, ಕಳೆದ ಎರಡೂವರೆ ವರ್ಷಗಳಿಂದ ಆರ್ ಅಶೋಕ ಅವರ ಬೆಂಗಾವಲು ವಾಹನದ ಚಾಲಕರಾಗಿದ್ದರು. ಆತ್ಮಹತ್ಯೆಗೆ ಕೌಟುಂಬಿಕ ಕಲಹವೇ ಕಾರಣ ಎಂದು ತಿಳಿದುಬಂದಿದೆ.


