ಪಾಕಿಸ್ತಾನದಲ್ಲಿ ತಾಲಿಬಾನ್ ಭಯೋತ್ಪಾದಕರು 11 ಮಂದಿ ಪಾಕಿಸ್ತಾನದ ಸೈನಿಕರನ್ನು ಹತ್ಯೆ ಮಾಡಿದ್ದಾರೆ.
ಅಫ್ಘಾನಿಸ್ತಾನದ ಗಡಿಯಲ್ಲಿರುವ ಪಾಕಿಸ್ತಾನದ ಖೈಬರ್ ಪ್ರಾಂತ್ಯದಲ್ಲಿ ಈ ದಾಳಿ ನಡೆಸಿದೆ.
ಪಾಕಿಸ್ತಾನ ಸೇನೆಯ ಲೆಫ್ಟಿನೆಂಟ್ ಕರ್ನಲ್ ಮತ್ತು ಮೇಜರ್ ಕೂಡಾ ತಾಲಿಬಾನ್ ಉಗ್ರರ ಗುಂಡಿನ ದಾಳಿಯಲ್ಲಿ ಹತರಾಗಿದ್ದಾರೆ.
ಪಾಕಿಸ್ತಾನ ಕೈಗೊಂಡ ಕಾರ್ಯಾಚರಣೆಯಲ್ಲಿ ಫಿಟ್ನಾ-ಅಲ್-ಖಾವಾರಿಜ್ ಉಗ್ರ ಸಂಘಟನೆಗೆ ಸೇರಿದ 19 ಮಂದಿ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪಾಕಿಸ್ತಾನ ಸೇನೆ ಹೇಳಿಕೊಂಡಿದೆ.


