ಕರ್ನಾಟಕ ಸರ್ಕಾರ ಒಬ್ಬರು ಐಎಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡಿದ್ದು, ಇಬ್ಬರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹುದ್ದೆಗಳನ್ನು ನೀಡಿದೆ.
ಶಾಲಾ ಶಿಕ್ಷಣಾ ಇಲಾಖೆಯ ಆಯುಕ್ತ ಡಾ ತ್ರಿಲೋಕ್‌ಚಂದ್ರ ಕೆ ವಿ ಅವರನ್ನು ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಶಿವಕುಮಾರ್ ಕೆ ಬಿ ಅವರಿಗೆ ಬೃಹತ್ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ವ್ಯವಸ್ಥಾಪಕ ನಿರ್ದೇಶಕರಾಗಿ ಹೆಚ್ಚುವರಿ ಹೊಣೆಗಾರಿಕೆಯನ್ನು ನೀಡಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆರೋಗ್ಯ ಮತ್ತು ಶಿಕ್ಷಣ ವಿಭಾಗದ ವಿಶೇಷ ಆಯುಕ್ತ ಸೂರಲ್ಕರ್ ವಿಕಾಸ್ ಕುಮಾರ್ ಅವರನ್ನು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರನ್ನಾಗಿ ವರ್ಗಾಯಿಸಿ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.


