ಐಎಎಸ್ ಅಧಿಕಾರಿ ಸಮೀರ್ ಶುಕ್ಲಾ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.
ಇವರು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ (ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಗಣಿ) ಕಾರ್ಯದರ್ಶಿಯಾಗಿದ್ದರು.
ಸಮೀರ್ ಶುಕ್ಲಾ ಅವರಿಗೆ ದೆಹಲಿಯಲ್ಲಿರುವ ಕರ್ನಾಟಕ ಭವನದ ಸಮನ್ವಯ ಕಾರ್ಯದರ್ಶಿಯಾಗಿಯೂ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.
ಹುದ್ದೆಗಾಗಿ ಕಾಯುತ್ತಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಅವರನ್ನು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ (ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಗಣಿ) ಕಾರ್ಯದರ್ಶಿಯಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


