ಈಶಾನ್ಯ ಭಾರತದ ಮಹಿಳೆಯೊಬ್ಬರಿಗೆ ಕಿರುಕುಳ ಮತ್ತು ಆಕೆಯ ಜೊತೆಗೆ ಅನುಚಿತವಾಗಿ ವರ್ತಿಸಿದ ಆಟೋ ಚಾಲಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಖ್ಯೆ 0306/2025ರ ಅಡಿಯಲ್ಲಿ ಆಟೋ ಚಾಲಕ ಪವನ್‌ನನ್ನು ಬಂಧಿಸಲಾಗಿದೆ.
ಮಹಿಳೆ ಕೊಟ್ಟ ದೂರು ಆಧರಿಸಿ ಆಟೋ ಚಾಲಕನ ಮೇಲೆ ಭಾರತೀಯ ನ್ಯಾಯ ಸಂಹಿತೆಯ ಕಲಂ 74,352,351(2) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಬೆಂಗಳೂರು ನಗರ ಪೊಲೀಸರು ಯಾವುದೇ ರೀತಿಯ ಅನುಚಿತ ವರ್ತನೆ ಹಾಗೂ ದೌರ್ಜನ್ಯವನ್ನು ಸಹಿಸುವುದಿಲ್ಲ ಎಂದು ಬೆಂಗಳೂರು ಪೊಲೀಸರು ಹೇಳಿದ್ದಾರೆ.


