ಸರ್ಕಾರಿ ಆವರಣಗಳಲ್ಲಿ RSS ಚಟುವಟಿಕೆಗಳಿಗೆ ನಿಷೇಧ – ಪರಿಶೀಲಿಸಿ ಶೀಘ್ರವೇ ಕ್ರಮಕ್ಕೆ CM ಸಿದ್ದರಾಮಯ್ಯ ಸೂಚನೆ

ಸರ್ಕಾರಿ ಕಚೇರಿಗಳ ಆವರಣಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಚಟುವಟಿಕೆಗಳಿಗೆ ನಿಷೇಧ ಹೇರುವ ಸಂಬಂದ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ & ಜೈವಿಕ ತಂತ್ರಜ್ಞಾನ ಸಚಿವರು ಆಗಿರುವ ಪ್ರಿಯಾಂಕ್‌ ಖರ್ಗೆ ಅವರು ಅಕ್ಟೋಬರ್‌ 4ರಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು.

ಈ ಪತ್ರ ಆಧರಿಸಿ ಪರಿಶೀಲಿಸಿ ಕೂಡಲೇ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಸಚಿವ ಪ್ರಿಯಾಂಕ್‌ ಖರ್ಗೆ ಪತ್ರದಲ್ಲಿ ಏನಿದೆ..?

ಜನ ಸಮುದಾಯದಲ್ಲಿ ದ್ವೇಷ ಬಿತ್ತುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸುವುಕ್ಕಾಗಿ ಹಾಗೂ ದೇಶದ ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯುವುದಕ್ಕಾಗಿ ಸಮಗ್ರತೆ, ಸಮಾನತೆ ಮತ್ತು ಏಕತೆಯ ಮೂಲಭೂತ ತತ್ವಗಳನ್ನೊಳಗೊಂಡ ಸಂವಿಧಾನವು ನಮಗೆ ಸಾಧಿಕಾರವನ್ನು ನೀಡುತ್ತದೆ.

ಆ ರಾಷ್ಟ್ರೀಯ ದಸ್ತೆಯಂಸೇವಕ ಸಂಘ ಎಂಬ ಹೆಸರಿನ ಸಂಘಟನೆಯು ಸರ್ಕಾರಿ ಮತ್ತು Bose ಸಪಾತ ಕಲೆಗಳು ಹಾಗೂ ಸಾರ್ವಜನಿಕ ಸರ್ಕಾರಿ ಮೈದಾನಗಳನ್ನು ಬಳಸಿಕೊಂಡು ಶಾಖೆ ಕಡಲೆನಡೆಸುತ್ತಾ ಘೋಷಣೆಗಳನ್ನು ಕೂಗುತ್ತಾ ಮಕ್ಕಳು ಮತ್ತು ಯುವ ಸಮುದಾಯದ ಮನಸಿನಲ್ಲಿ ಶ್ರೀನಿವಾರತದ ವಾಣಿಯ ವಿರುದ್ಧವಾಗಿ, ಹಾಗೂ ಸಂವಿಧಾನದ ಆಶಯಗಳ ವಿರುದ್ಧವಾಗಿ ನಕಾರಾತ್ಮಕವಆಲೋಚನೆಗಳನ್ನು ತುಂಬಲಾಗುತ್ತಿದೆ.

ಪೊಲೀಸ್ ಮೂಲಕ ಅನುಮತಿ ಪಡೆಯದ ದೊಣ್ಣೆಗಳನ್ನು ಹಿಡಿದು ಆಕ್ರಮಣಕಾರಿ ಪದರ್ಶನ ಮುಗ್ಧ ಮಕ್ಕಳು ಹಾಗೂ ಯುವಜನರ ಮನಸಿನ ಮೇಲೆ ದುಷ್ಪರಿಣಾಮ ಬೀರಲಾಗುತ್ತಿದೆ.

ನಾಡಿನ ಮಕ್ಕಳು, ಯುವ ಸಮುದಾಯ, ಸಾರ್ವಜನಿಕರು ಮತ್ತು ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ RSS ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ

ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಪತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗಿರೀಶ್‌ ಮಟ್ಟಣ್ಣನವರ್‌ ವಿರುದ್ಧ ತನಿಖೆಗೆ ಆದೇಶ

ಗಿರೀಶ್‌ ಮಟ್ಟಣ್ಣನವರ್‌ (Girish Mattannanavar) ವಿರುದ್ಧ ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ...

ಭೂತಾನ್‌ ಪ್ರವಾಸಕ್ಕೆ ಹೊರಟ ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (Prime Minister Narendra Modi) ಇವತ್ತಿನಿಂದ...

ಹಾಸನದ ಜನಪ್ರಿಯ ಆಸ್ಪತ್ರೆ ಮಾಲೀಕ ಡಾ.ಅಬ್ದುಲ್‌ ಬಶೀರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲು

ನ್ಯಾಯಾಲಯಕ್ಕೆ ಸುಳ್ಳು ಸಾಕ್ಷ್ಯ ಮತ್ತು ಸುಳ್ಳು ದಾಖಲೆಗಳನ್ನು ಸಲ್ಲಿಸಿದ ಆರೋಪದಡಿಯಲ್ಲಿ ಹಾಸನ...

ದೆಹಲಿ ಕೆಂಪುಕೋಟೆ ಬಳಿ ಸ್ಫೋಟ – 8 ಸಾವು

ದೆಹಲಿಯ ಕೆಂಪುಕೋಟೆಯಲ್ಲಿ ಸಂಭವಿಸಿರುವ ಕಾರ್‌ ಬಾಂಬ್‌ ಸ್ಫೋಟದಲ್ಲಿ 8 ಮಂದಿ ಪ್ರಾಣ...