ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆಯಲ್ಲಿ ಜೆಡಿಎಸ್ ಮತ್ತೊಂದು ತಳಮಟ್ಟದ ಆಘಾತ ಅನುಭವಿಸಿದೆ. ಮಾಗಡಿ ತಾಲೂಕಿನ ಜೆಡಿಎಸ್ (JDS) ಮುಖಂಡರು ಕಾಂಗ್ರೆಸ್ (Congress) ಸೇರ್ಪಡೆಯಾಗಿದ್ದಾರೆ.
ಮಾಗಡಿ (Magadi) ತಾಲ್ಲೂಕಿನ ಕುದೂರು (Kuduru) ಹೋಬಳಿಯ ಹುಲಿಕಲ್ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಶಶಿಧರ್ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾದ ನಾಗಭೂಷಣ್ ಅವರು ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರೂ (KRDCL) ಮಾಗಡಿ ಕ್ಷೇತ್ರದ ಶಾಸಕರೂ ಆಗಿರುವ ಹೆಚ್ ಸಿ ಬಾಲಕೃಷ್ಣ (H C Balakrishna) ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.
ಇದೇ ಮೇನಲ್ಲಿ ಬೆಂಗಳೂರು ಜಿಲ್ಲಾ ಹಾಲು ಒಕ್ಕೂಟದ (BAMUL) ನಿರ್ದೇಶಕ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಗೆ ಬರುವ ಎಲ್ಲಾ ಆರೂ ಸ್ಥಾನಗಳಲ್ಲಿ ಕಾಂಗ್ರೆಸ್ ಗೆದ್ದಿತ್ತು.


