ಐವರು IAS ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯಾಗಿದ್ದ ರಂದೀಪ್.ಡಿ ಅವರನ್ನು ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.
ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ನಿಗಮದ ನಿರ್ದೇಶಕರಾಗಿದ್ದ ನಿತೇಶ್ ಪಾಟೀಲ್ ಅವರನ್ನು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಹುದ್ದೆಗಾಗಿ ಕಾಯುತ್ತಿದ್ದ ರಾಮಚಂದ್ರನ್.ಆರ್ ಅವರನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.
ಹುದ್ದೆಗಾಗಿ ಕಾಯುತ್ತಿದ್ದ ಡಾ ಸತೀಶ್ .ಬಿ.ಸಿ ಅವರನ್ನು ಸಣ್ಣ ಮತ್ತು ಮಧ್ಯಮ ಕೈಗಾರಿಕೆ ನಿಗಮದ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.
ಹುದ್ದೆಗಾಗಿ ಕಾಯುತ್ತಿದ್ದ ಎಂ.ಎಸ್.ದಿವಾಕರ ಇವರನ್ನು ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.
ಎಂ.ಎಸ್.ದಿವಾಕರ ಅವರಿಗೆ ಅಟಲ್‌ಜನಸ್ನೇಹಿ ಕೇಂದ್ರದ ನಿರ್ದೇಶಕ ಹುದ್ದೆಯನ್ನೂ ಹೆಚ್ಚುವರಿಯನ್ನಾಗಿ ನೀಡಲಾಗಿದೆ.


