ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗ ಸಿದ್ಧತೆ ಆರಂಭಿಸಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ (Greater Bengaluru Authority) ಅಡಿಯಲ್ಲಿ ಬರುವ ಐದು ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಸುವ ಸಂಬಂಧ ಮತದಾರರ ಪಟ್ಟಿ ತಯಾರಿಸುವಂತೆ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಮತದಾರರ ಪಟ್ಟಿ ಸಿದ್ಧಪಡಿಸುವ ಸಲುವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರನ್ನು ಜಿಲ್ಲಾ ಚುನಾವಣಾಧಿಕಾರಿ ಎಂದು ನೇಮಿಸಿ ಆಯೋಗ ಆದೇಶ ಹೊರಡಿಸಿದೆ.
ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ ಈ ಐದು ಪಾಲಿಕೆಗಳ ಆಯುಕ್ತರನ್ನು ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಎಂದು ನೇಮಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.




