ದೆಹಲಿ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ ನ್ಯಾಯಮೂರ್ತಿಗಳನ್ನು ವರ್ಗಾವಣೆಗೊಳಿಸಿ ಕೇಂದ್ರ ಸರ್ಕಾರ ಇವತ್ತು ಅಧಿಸೂಚನೆ ಹೊರಡಿಸಿದೆ.
ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಗಳಾದ ತಾರಾ ವಿತಾಸ್ತಾ ಗಂಜು ಅವರನ್ನು ಕರ್ನಾಟಕ ಹೈಕೋರ್ಟ್‌ಗೂ ಮತ್ತು ಅರುಣ್ ಮೊಂಗಾ ಅವರನ್ನು ರಾಜಸ್ಥಾನ ಹೈಕೋರ್ಟ್‌ಗೂ ವರ್ಗಾವಣೆಗೊಳಿಸಲಾಗಿದೆ.
ಇದೇ ವರ್ಷದ ಆಗಸ್ಟ್‌ನಲ್ಲಿ ಇಬ್ಬರು ನ್ಯಾಯಮೂರ್ತಿಗಳ ವರ್ಗಾವಣೆಗೆ ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸ್ಸು ಮಾಡಿತ್ತು.
ವಿಶೇಷ ಎಂದರೆ ರಾಜಸ್ಥಾನ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಮೊಂಗಾ ಅವರು ಜುಲೈನಲ್ಲಷ್ಟೇ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
ರಾಜಸ್ಥಾನ ಹೈಕೋರ್ಟ್ ನ್ಯಾಯಮೂರ್ತಿಗಳಾದ ಅವ್ನೀಶ್ ಜಿನ್‌ಗನ್ ಮತ್ತು ನ್ಯಾಯಮೂರ್ತಿ ದಿನೇಶ್ ಮೆಹ್ತಾ ಅವರನ್ನು ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ವರ್ಗಾಯಿಸಲಾಗಿದೆ.
ಕೇರಳ ಹೈಕೋರ್ಟ್ ನ್ಯಾಯಮೂರ್ತಿ ಸಿ ಸುಧಾ ಅವರನ್ನು ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿ ವರ್ಗಾಯಿಸಲಾಗಿದೆ.
ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಚೀಕಟಿ ಮನವೇಂದ್ರನಾಥ್‌ರಾಯ್ ಅವರನ್ನು ಆಂಧ್ರಪ್ರದೇಶ ಹೈಕೋರ್ಟ್ ನ್ಯಾಯಮೂರ್ತಿಯಾಗಿ ವರ್ಗಾಯಿಸಲಾಗಿದೆ.
ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ದೊನಾಡಿ ರಮೇಶ್ ಅವರನ್ನು ಆಂಧ್ರಪ್ರದೇಶ ಹೈಕೋರ್ಟ್ ನ್ಯಾಯಮೂರ್ತಿಯಾಗಿ ವರ್ಗಾಯಿಸಲಾಗಿದೆ.
ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಸಂದೀಪ್ ಎನ್ ಭಟ್ ಅವರನ್ನು ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಮೂರ್ತಿಯಾಗಿ ವರ್ಗಾಯಿಸಲಾಗಿದೆ.
ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಸಂಜಯ್ ಕುಮಾರ್ ಸಿಂಗ್ ಅವರನ್ನು ಪಾಟ್ನಾ ಹೈಕೋರ್ಟ್ ನ್ಯಾಯಮೂರ್ತಿಯಾಗಿ ವರ್ಗಾಯಿಸಲಾಗಿದೆ.
ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಸುಭೆಂದು ಸಮಂತಾ ಅವರನ್ನು ಆಂಧ್ರಪ್ರದೇಶ ಹೈಕೋರ್ಟ್ ನ್ಯಾಯಮೂರ್ತಿಯಾಗಿ ವರ್ಗಾಯಿಸಲಾಗಿದೆ.
ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ನಿಶಾ ಬಾನು ಅವರನ್ನು ಕೇರಳ ಹೈಕೋರ್ಟ್ ನ್ಯಾಯಮೂರ್ತಿಯಾಗಿ ವರ್ಗಾಯಿಸಲಾಗಿದೆ.


