ಗ್ರೇಟರ್‌ ಬೆಂಗಳೂರಿನ 15 ಲಕ್ಷ ಆಸ್ತಿಗಳಿಗೆ ನವೆಂಬರ್‌ 1ರಿಂದ A ಖಾತಾ

ನವೆಂಬರ್ 1 ನೇ‌ ತಾರೀಕಿನಿಂದ ಬಿ ಖಾತೆಗಳನ್ನು ಎ ಖಾತೆಗಳಾಗಿ ಬದಲಾವಣೆ ಮಾಡುವ ಐತಿಹಾಸಿಕ ನಿರ್ಣಯಕ್ಕೆ ಸರ್ಕಾರ ತೀರ್ಮಾನ ಮಾಡಿದೆ. ಇದು ಬೆಂಗಳೂರಿನ 15 ಲಕ್ಷ ಆಸ್ತಿಗಳ ಮಾಲೀಕರಿಗೆ ಉಪಯೋಗವಾಗುತ್ತದೆ. ಇದೊಂದು ಕ್ರಾಂತಿಕಾರಕ ತೀರ್ಮಾನ.‌ ಆಸ್ತಿ ಶುದ್ಧೀಕರಣಕ್ಕೆ ನಾಂದಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ‌ಅವರು ಹೇಳಿದರು.

ಜಿಬಿಎ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೂ ಎ-ಖಾತಾ ನೀಡಲು ಹೊಸದಾಗಿ ಜಾರಿಗೊಳಿಸಿರುವ ಆನ್ ಲೈನ್ ವ್ಯವಸ್ಥೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ರವರು ವಿಧಾನಸೌಧದಲ್ಲಿ ಬುಧವಾರ ಚಾಲನೆ ನೀಡಿ, ಮಾತನಾಡಿದರು.

“2 ಸಾವಿರ ಚ.ಮೀ. ವಿಸ್ತೀರ್ಣದ ಆಸ್ತಿಗಳು ಈ ಕಾರ್ಯಕ್ರಮದ ವ್ಯಾಪ್ತಿಗೆ ಬರುತ್ತವೆ. 2 ಸಾವಿರ ಚದರ ಮೀಟರ್ ಗಿಂತ ಹೆಚ್ಚು ವಿಸ್ತೀರ್ಣದ ಆಸ್ತಿಗಳಿಗೆ ಕ್ಯಾಡ್ ಡ್ರಾಯಿಂಗ್ ಸೇರಿದಂತೆ ಇತರೇ ದಾಖಲೆಗಳನ್ನು ನೀಡಬೇಕಾಗುತ್ತದೆ. ನವೆಂಬರ್ 1 ರಿಂದ ಪ್ರಾರಂಭವಾಗುವ ಈ ಅಭಿಯಾನ 100 ದಿನಗಳ ನಡೆಯಲಿದೆ. 500 ರೂಪಾಯಿ ಅರ್ಜಿ ಶುಲ್ಕವನ್ನು ಕಟ್ಟಿ ಆನ್ ಲೈನ್ ಮೂಲಕ ನೋಂದಣಿ ಮಾಡಿಸಿಕೊಂಡರೆ ಪಾಲಿಕೆ ಅಧಿಕಾರಿಗಳೇ ಮನೆ ಬಾಗಿಲಿಗೆ ಬಂದು ಸೇವೆ ನೀಡುತ್ತಾರೆ” ಎಂದು ಮಾಹಿತಿ ನೀಡಿದರು.

“ಆಸ್ತಿ ಮಾಲೀಕರು ಸದರಿ ಆಸ್ತಿಯ ಗೈಡೆನ್ಸ್ ದರದ ಶೇ.‌5 ರಷ್ಟನ್ನು ಶುಲ್ಕವಾಗಿ ಸರ್ಕಾರಕ್ಕೆ ಪಾವತಿಸಬೇಕಾಗುತ್ತದೆ. ಇಂತಹ ಬಡಾವಣೆಗಳಿಗೆ ವಿದ್ಯುತ್, ನೀರು, ಒಳಚರಂಡಿ ಸೇರಿದಂತೆ ಇತರೇ ಮೂಲಸೌಕರ್ಯ ವ್ಯವಸ್ಥೆಗಳನ್ನು ಮಾಡಬೇಕಾಗುತ್ತದೆ. ಈ ದೃಷ್ಟಿಯಿಂದ ಗೈಡೆನ್ಸ್ ದರದ ಶೇ.5 ರಷ್ಟು ‌ಮಾತ್ರ ಶುಲ್ಕ ವಿಧಿಸಲಾಗಿದೆ.‌ 100 ದಿನದ ನಂತರ ಹೆಚ್ಚುವರಿ ಶುಲ್ಕ ನಿಗದಿ ಮಾಡಲಾಗುತ್ತದೆ.‌ ಹೆಚ್ಚುವರಿ ಶುಲ್ಕದ ಪ್ರಮಾಣ ಆನಂತರ ತಿಳಿಸಲಾಗುವುದು” ಎಂದರು.

“ಪ್ರತಿ ಪಾಲಿಕೆಯು ಎರಡೆರಡು ಸ್ಥಳಗಳಲ್ಲಿ ‘ಹೆಲ್ಪ್ ಡೆಸ್ಕ್’ (ಕಚೇರಿ) ಗಳನ್ನು ತೆಗೆಯಲಾಗುವುದು. ಬೆಂಗಳೂರು ಒನ್ ಕೇಂದ್ರದಲ್ಲಿಯೂ ನೋಂದಣಿಯಾಗಲು ಅವಕಾಶ ಕಲ್ಪಿಸಲಾಗುವುದು. ಸಾರ್ವಜನಿಕರು ಯಾರೂ ಸಹ ಒಂದೇ ಒಂದು ರೂಪಾಯಿ ಲಂಚ ನೀಡುವಂತಿಲ್ಲ” ಎಂದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್‌ ಶಾಸಕನಿಗೆ ಮತ್ತೊಂದು ಆಘಾತ

ಕರ್ನಾಟಕ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ಗೆ (Congress MLA Satish Sail)...

Betting: ಇಬ್ಬರು ಕ್ರಿಕೆಟ್‌ ಆಟಗಾರರಿಗೆ ಶಾಕ್‌

ಇಬ್ಬರು ಕ್ರಿಕೆಟಿಗರಿಗೆ ಸೇರಿದ 11 ಕೋಟಿ ರೂಪಾಯಿ ಮೊತ್ತದ ಆಸ್ತಿಯನ್ನು ಜಾರಿ...

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಲಿಂಗಾಯತ ಸಮಾಜ ಕಿಡಿ

ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಲಿಂಗಾಯತ ಸಮಾಜ ಸಿಡಿದೆದಿದ್ದೆ. ಲಿಂಗಾಯತ ಸಮಾಜದ...

BJP ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ MLA S.R. ವಿಶ್ವನಾಥ್‌ ಅಸಮಾಧಾನ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (Greater Bengaluru Authority) ಅಡಿಯಲ್ಲಿ ಬರುವ ಐದು...