ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆಗೆ ಸಂಘರ್ಷಕ್ಕಿಳಿದಿದ್ದ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಇವತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಕಾಣಿಸಿಕೊಂಡಿದ್ದಾರೆ.



ಬೆಂಗಳೂರಿನ ಮಲ್ಲತ್ತಳ್ಳಿಯ ಕಲಾಗ್ರಾಮದಲ್ಲಿ ನಡೆದ “ಕನಕ ಕಾವ್ಯ ದೀವಿಗೆ” ಮೂರು ದಿನಗಳ ಕನಕ ಸಂಭ್ರಮ, ಸಂಸ್ಕೃತಿಯನ್ನು ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಕದಲ್ಲೇ ಮುನಿರತ್ನ ನಾಯ್ಡು ವೇದಿಕೆ ಹಂಚಿಕೊಂಡಿದ್ದಾರೆ.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಜೆಪಿ ಪಾರ್ಕ್‌ನಲ್ಲಿ ನಡೆದಿದ್ದ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಡಿ ಕೆ ಶಿವಕುಂಆರ್ ಅವರು ಮುನಿರತ್ನ ನಾಯ್ಡು ಅವರನ್ನು ಕರಿ ಟೋಪಿ ಎಂಎಲ್‌ಎ ಎಂದು ಕರೆದಿದ್ದರು.

ಇದಾದ ಬಳಿಕ ಇಬ್ಬರ ನಡುವೆಯೂ ಸಂಘರ್ಷವಾಗಿತ್ತು. ಆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಮುನಿರತ್ನ ನಾಯ್ಡು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಹೊಗಳಿ ಡಿ.ಕೆ.ಶಿವಕುಮಾರ್ ಅವರನ್ನು ತೆಗಳಿದ್ದರು.


