ವೈಟ್ ಟ್ಯಾಪಿಂಗ್ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರಿನ ಈ ರಸ್ತೆಯನ್ನು 4 ತಿಂಗಳು ಬಂದ್ ಮಾಡಿ ಅದೇಶ ಹೊರಡಿಸಲಾಗಿದೆ. 11 ತಿಂಗಳು ಈ ಕಾಮಗಾರಿ ನಡೆಯಲಿದೆ.
ಮಹಾಲಕ್ಷ್ಮೀ ಲೇಔಟ್‌ನ 12ನೇ ಕ್ರಾಸ್ ರಸ್ತೆಯ ವೆಸ್ಟ್ ಆಫ್ ಕಾರ್ಡ್ ರಸ್ತೆಯಿಂದ ಶಕ್ತಿ ಗಣಪತಿ ದೇವಸ್ಥಾನದವರೆಗೆ 1 ಕಿಲೋ ಮೀಟರ್ ರಸ್ತೆಯ ವೈಟ್ ಟಾಪಿಂಗ್ ಕಾಮಗಾರಿ ಹಿನ್ನೆಲೆಯಲ್ಲಿ 4 ತಿಂಗಳ ಕಾಲ ರಸ್ತೆ ಸಂಚಾರವನ್ನು ನಿರ್ಬಂಧಿಸಲಾಗಿದೆ.
ವೆಸ್ಟ್ ಆಫ್ ಕಾರ್ಡ್ ರಸ್ತೆ, ಮಹಾಲಕ್ಷ್ಮೀ ಲೇಔಟ್ ಎಂಟ್ರೆನ್ಸ್ ಮಾರ್ಗದ ಮೂಲಕ ಶಕ್ತಿ ಗಣಪತಿ ದೇವಸ್ಥಾನದ ಕಡೆಗೆ ಸಂಚರಿಸುವ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಸರ್ಕಾರ ಆದೇಶ ಹೊರಡಿಸಿದೆ.

ಮಹಾಲಕ್ಷ್ಮೀ ಲೇಔಟ್‌ನ 12ನೇ ಕ್ರಾಸ್ ರಸ್ತೆಯಲ್ಲಿ ವೆಸ್ಟ್ ಆಫ್ ಕಾರ್ಡ್ ರಸ್ತೆಯಿಂದ ಶಕ್ತಿ ಗಣಪತಿ ದೇವಸ್ಥಾನದವರೆಗೆ ಶಂಕರನಗರ, ಲಗ್ಗೆರೆ, ಪೀಣ್ಯ, ಮಹಾಲಕ್ಷ್ಮೀ ಲೇಔಟಗ್ ರಸ್ತೆ ಕಡೆಯಿಂದ ಮಹಾಲಕ್ಷ್ಮೀ ಲೇಔಟ್ ಎಂಟ್ರೆನ್ಸ್ ಕಡೆಗೆ ಸಂಚರಿಸುವ ವಾಹನಗಳಿಗೆ ಒಂದು ಭಾಗದಲ್ಲಿ ಮಾತ್ರ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. 



