ಗ್ರೇಟರ್ ಬೆಂಗಳೂರು ಪ್ರಾಧಿಕಾರದ (Greater Bengaluru) ವ್ಯಾಪ್ತಿಯಲ್ಲಿರುವ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಬೆಸ್ಕಾಂ ಮುಖ್ಯ ಪ್ರಧಾನ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.
ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ 2024ರ ಕಲಂ 241(7)ರ ಅನ್ವಯ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 1,200 ಚದರಡಿಗಳ ವೀಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ನೆಲ+2ಅಂತಸ್ತು ಅಥವಾ ಸ್ಟಿಲ್ಟ್+3 ಅಂತಸ್ತಿನವರೆಗಿನ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪಡೆಯುವುದರಿಂದ ವಿನಾಯಿತಿ ನೀಡಿ ಸರ್ಕಾರ ನೀಡಿರುತ್ತದೆ.
ಈ ಸಂಬಂಧ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಕ್ಷೇತ್ರಾಧಿಕಾರಿಗಳು ಸರ್ಕಾರದ ಆದೇಶಾನುಸಾರ ವಿದ್ಯುತ್ ಸಂಪರ್ಕವನ್ನು ಕಲ್ಪಿಸಲು ಸೂಚಿಸಲಾಗಿದೆ
ಎಂದು ಬೆಸ್ಕಾಂನ ಮುಖ್ಯ ಪ್ರಧಾನಬ ವ್ಯವಸ್ಥಾಪಕರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.


