ಲಿಂಗಾಯತ ಸ್ವಾಮೀಜಿಗಳ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗೆ (Adrishya Kadsiddheshwar Swamiji) ಬಾಗಲಕೋಟೆ ಜಿಲ್ಲಾ ಪ್ರವೇಶಕ್ಕೂ ನಿರ್ಬಂಧ ಹೇರಲಾಗಿದೆ.
ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗೆ ಬಾಗಲಕೋಟೆ ಜಿಲ್ಲೆಗೆ ನಿರ್ಬಂಧ ಹೇರಿ ಬಾಗಲಕೋಟೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಆದೇಶ ಹೊರಡಿಸಿದ್ದಾರೆ.
ವಿಜಯಪುರ ಜಿಲ್ಲಾಧಿಕಾರಿಗಳು ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಸ್ವಾಮೀಜಿಗಳು ಬಾಗಲಕೋಟೆ ಜಿಲ್ಲೆಯ ಬೀಳಗಿಯ ಚಿಕ್ಕಲಗುಂಡಿಯಲ್ಲಿರುವ ಮಲ್ಲಿಕಾರ್ಜುನ ಮಠದಲ್ಲಿ ತಂಗಿದ್ದಾರೆ. ಇವರು ಮಲ್ಲಿಕಾರ್ಜುನ ಮಠದಲ್ಲಿ ತಂಗುವುದು ಬಾಗಲಕೋಟೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಶಾಂತಿಗೆ ಭಂಗ ತರಬಹುದು ಎಂದು ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಮ್ಮ ವರದಿಯಲ್ಲಿ ಹೇಳಿದ್ದಾರೆ. ಈಗಾಗಲೇ ಸ್ವಾಮೀಜಿಯವರ ಹೇಳಿಕೆ ವಿರುದ್ಧ ತೀವ್ರ ಸ್ವರೂಪದ ಪ್ರತಿಭಟನೆಗಳೂ ಆಗುತ್ತಿವೆ.
ವಿಜಯಪುರ ಜಿಲ್ಲಾಡಳಿತ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಕೂಡಾ ಎತ್ತಿಹಿಡಿದಿದೆ.
ಸ್ವಾಮೀಜಿ ಬಾಗಲಕೋಟೆ ಜಿಲ್ಲೆಯಲ್ಲಿ ಉಳಿದುಕೊಳ್ಳುವುದರಿಂದ ಕಾನೂನು ಸುವ್ಯವಸ್ಥೆ ಮತ್ತು ಶಾಂತಿಗೆ ಭಂಗ ಉಂಟಾಗಲಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಅಶಾಂತಿಯನ್ನು ತಡೆಯುವ ಸಲುವಾಗಿ ಮಲ್ಲಿಕಾರ್ಜುನ ಮಠವನ್ನು ಬಿಟ್ಟು ತೆರಳಬೇಕು
ಎಂದು ಅಕ್ಟೋಬರ್ 17ರಂದು ಅಂದರೆ ನಿನ್ನೆ ಬಾಗಲಕೋಟೆ ಜಿಲ್ಲಾಧಿಕಾರಿಗಳು ಹೊರಡಿಸಿದ್ದಾರೆ.


