ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ 184 ಹುದ್ದೆಗಳ ನೇಮಕಾತಿಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ.
2023ರ ಜೂನ್ 27ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆ ನಡೆಸಿತು. ಈ ನೇಮಕಾತಿಯಲ್ಲಿ ಕಲ್ಯಾಣ ಅಧಿಕಾರಿಗಳ – 12 ಹುದ್ದೆಗಳು, ಕ್ಷೇತ್ರ ನಿರೀಕ್ಷಕರು – 60 ಹುದ್ದೆಗಳು, ಪ್ರಥಮ ದರ್ಜೆ ಸಹಾಯಕರು- 12 ಹುದ್ದೆ ಮತ್ತು ದ್ವಿತೀಯ ದರ್ಜೆ ಸಹಾಯಕರು – 100 ಹುದ್ದೆಗಳಿಗೆ ಪರೀಕ್ಷೆ ನಡೆದಿತ್ತು.
ಅಂತಿಮ ಆಯ್ಕೆ ಪಟ್ಟಿಯನ್ನು ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಇವತ್ತು ಪ್ರಕಟಿಸಲಾಗಿದೆ.



