ಕರ್ನಾಟಕ ಸರ್ಕಾರದ ಒಳ ಮೀಸಲಾತಿ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ನಾಲ್ಕು ಸಮುದಾಯಗಳು ಅರ್ಜಿ ಸಲ್ಲಿಸಿವೆ.
ಬಂಜಾರ, ಕೊರವ, ಕೊರಚ, ಭೋವಿ ಸಮುದಾಯದವರು ಅರ್ಜಿ ಸಲ್ಲಿಸಿದೆ.
ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಎಚ್ ನಾಗಮೋಹನ್ ದಾಸ್ ಅವರು ನೀಡಿದ್ದ ವರದಿಯನ್ನು ಆಧರಿಸಿ ರಾಜ್ಯದಲ್ಲಿರುವ 101 ಪರಿಶಿಷ್ಟ ಜಾತಿಗಳ ವರ್ಗೀಕಣ ಮತ್ತು ಒಳ ಮೀಸಲಾತಿಗೆ ಸಂಬಂಧಿಸಿದಂತೆ ಆದೇಶ ಹೊರಡಿಸಿತ್ತು.
ಈ ವರದಿಯಲ್ಲಿ ಪರಿಶಿಷ್ಟ ಜಾತಿಯ 101 ಜಾತಿಗಳನ್ನು ಎಡಗೈ, ಬಲಗೈ ಮತ್ತು ಸ್ಪೃಶ್ಯ ಎಂದು ವರ್ಗೀಕರಿಸಲಾಗಿತ್ತು.
ಎಡಗೈ ಮತ್ತು ಬಲಗೈ ಸಮುದಾಯಗಳಿಗೆ ತಲಾ 6ರಷ್ಟು, ಕೊರಚ, ಕೊರಮ, ಲಂಬಾಣಿ ಮತ್ತು ಭೋವಿ ಸಮುದಾಯಗಳನ್ನೊಳಗೊಂಡ ಸ್ಪೃಶ್ಯ ಸಮುದಾಯಗಳಿಗೆ 5ರಷ್ಟು ಮೀಸಲಾತಿಯನ್ನು ನೀಡಲಾಗಿತ್ತು. ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಂಪುಟ ಒಪ್ಪಿಗೆ ನೀಡಿತ್ತು.
ಇದನ್ನು ಪ್ರಶ್ನಿಸಿ ಬಂಜಾರ, ಬೋವಿ, ಕೊರಮ, ಕೊರಚ ಸಮಾಜ ಕಲ್ಯಾಣ ಸಂಘದ ಶಾಮರಾವ್ ಕೆ ಪವಾರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಎಸ್‌ಸಿ-ಎಸ್‌ಟಿ ಆಯೋಗದ ಅಧ್ಯಕ್ಷರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.


