ಕರ್ನಾಟಕ BJP ಸುಳ್ಳಿನ ಕಾರ್ಖಾನೆಯ ಓವರ್‌ಟೈಂ ಕೆಲಸ – ಕರಾಳ ಪಟ್ಟಿ ಕೊಟ್ಟ ಸಚಿವ ರಾಮಲಿಂಗಾ ರೆಡ್ಡಿ

ಕರ್ನಾಟಕ ಬಿಜೆಪಿಯ (Karnataka BJP) ಸುಳ್ಳಿನ ಕಾರ್ಖಾನೆ ಮತ್ತೆ ಓವರ್‌ಟೈಮ್ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು (Minister Ramalinga Reddy) ಬಿಹಾರ ಚುನಾವಣೆಗೆ (Bihar Election) ಕಾಂಗ್ರೆಸ್ ಸರ್ಕಾರ ಹಣ ನೀಡುತ್ತಿದೆ ಎಂಬ ಆರೋಪ ಹಾಸ್ಯಾಸ್ಪದ ತಿರುಗೇಟು ನೀಡಿದ್ದಾರೆ.

ಬಿಜೆಪಿಯವರಿಗೆ ಅವರದ್ದೇ ಆಡಳಿತದ ವೇಳೆಯ ಕರಾಳ ಇತಿಹಾಸದ ಪಟ್ಟಿಯನ್ನೂ ನೆನೆಪಿಸಿದ್ದಾರೆ.

ನಿಮ್ಮ ಸುಳ್ಳಿನ ಸರಮಾಲೆಗೆ ಕೊನೆಯೇ ಇಲ್ಲವೇ? ಚುನಾವಣೆಗೆ ಅಕ್ರಮ ಭ್ರಷ್ಟಾಚಾರದ ಹಣವನ್ನು ಬಳಸುವುದು ನಿಮ್ಮ ಜಾಯಮಾನ, ಕಾಂಗ್ರೆಸ್‌ನದ್ದಲ್ಲ. ಸ್ವಾತಂತ್ರ್ಯ ಪೂರ್ವದಿಂದಲೂ ದೇಶಕ್ಕೆ ನೀಡಿದ ಕೊಡುಗೆ ಮತ್ತು ಜನಪರ ಕೆಲಸಗಳಿಂದ ಕಾಂಗ್ರೆಸ್ ಪಕ್ಷ ಇಂದಿಗೂ ಸದೃಢವಾಗಿದೆ.

ನಿಮ್ಮದೇ ಆಡಳಿತದ ಕರಾಳ ಇತಿಹಾಸವನ್ನು ಒಮ್ಮೆ ನೆನಪಿಸುತ್ತೇನೆ:

2008-2013 ಮತ್ತು 2019-2023: ಈ ಅವಧಿಗಳಲ್ಲಿ ಕರ್ನಾಟಕದಲ್ಲಿ ನಿಮ್ಮದೇ ಸರ್ಕಾರವಿತ್ತು. ಆಗ ಮುಖ್ಯಮಂತ್ರಿಗಳಾಗಿದ್ದ ಶ್ರೀ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ಜಗದೀಶ್ ಶೆಟ್ಟರ್ ಮತ್ತು ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿ ಮಹಾರಾಷ್ಟ್ರ, ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್ ಸೇರಿದಂತೆ ದೇಶದ ಬಹುತೇಕ ರಾಜ್ಯಗಳಲ್ಲಿ ಚುನಾವಣೆಗಳು ನಡೆದವು. ಆಗ ಕರ್ನಾಟಕದ ಸಂಪತ್ತನ್ನು ಆ ಚುನಾವಣೆಗಳಿಗೆ ನೀವೆಲ್ಲರೂ ಹಂಚಿ ಕಳುಹಿಸಿದ್ದೀರಾ? ರಾಜ್ಯದ ಜನತೆಯ ಮುಂದೆ ಉತ್ತರಿಸುವ ಧೈರ್ಯ ನಿಮಗಿದೆಯೇ?

ಆಪರೇಷನ್ ಕಮಲ: ಹಣದ ಹೊಳೆ ಹರಿಸಿ, ಶಾಸಕರನ್ನು ಕುದುರೆಗಳಂತೆ ಖರೀದಿಸಿ ಪ್ರಜಾಪ್ರಭುತ್ವವನ್ನೇ ಕಗ್ಗೊಲೆ ಮಾಡಿದ ‘ಆಪರೇಷನ್ ಕಮಲ’ದ ಪಿತಾಮಹರು ನೀವು ಎನ್ನುವುದು ರಾಜ್ಯದ ಮೂಲೆ ಮೂಲೆಯಲ್ಲಿರುವ ಸಾಮಾನ್ಯ ಪ್ರಜೆಗೂ ತಿಳಿದಿದೆ. ಭ್ರಷ್ಟಾಚಾರದ ಗಂಗೋತ್ರಿಯಾದ ನೀವು, ಇಂದು ಶುದ್ಧ ಹಸ್ತರೆಂದು ಬಿಂಬಿಸಿಕೊಳ್ಳಲು ಹೊರಟಿರುವುದು ಈ ಶತಮಾನದ ಅತಿದೊಡ್ಡ ಜೋಕ್! ಅಧಿಕಾರಕ್ಕಾಗಿ ನೀವು ಖರೀದಿಸಿದ ಕ್ರಿಮಿನಲ್ ಹಿನ್ನೆಲೆಯ ಶಾಸಕರನ್ನು ಕರ್ನಾಟಕ ಎಂದಿಗೂ ಮರೆಯುವುದಿಲ್ಲ.

40% ಸರ್ಕಾರ: ರಾಜ್ಯ ಗುತ್ತಿಗೆದಾರರ ಸಂಘವು ‘40% ಕಮಿಷನ್’ ಆರೋಪ ಮಾಡಿ ಪ್ರಧಾನಿಗೆ ಪತ್ರ ಬರೆದು ನಿಮ್ಮ ಸರ್ಕಾರದ ಭ್ರಷ್ಟಾಚಾರವನ್ನು ಜಗಜ್ಜಾಹೀರು ಮಾಡಿತ್ತು.

ಆ ಕಮಿಷನ್ ಹಣ ಯಾವ ಯಾವ ರಾಜ್ಯಗಳಿಗೆ ಹೋಯಿತು ಎಂದು ಜನತೆಗೆ ಈಗಲಾದರೂ ಲೆಕ್ಕ ಕೊಡುವಿರ?

ನಮ್ಮ ಸರ್ಕಾರ ‘ಗ್ಯಾರಂಟಿ’ಗಳ ಮೂಲಕ ರಾಜ್ಯದ ಬಡವರ ಖಾತೆಗೆ ನೇರವಾಗಿ ಹಣ ಜಮೆ ಮಾಡುತ್ತಿದೆ. ನಿಮ್ಮಂತೆ ಚುನಾವಣಾ ಬಾಂಡ್‌ಗಳ ಹೆಸರಿನಲ್ಲಿ ಕಪ್ಪು ಹಣವನ್ನು ಬಿಳಿ ಮಾಡುವ ಚಾಳಿ ನಮಗಿಲ್ಲ.

ವಾಸ್ತವವಾಗಿ, 2019ರಿಂದ ಬಿಜೆಪಿ ಚುನಾವಣಾ ಬಾಂಡ್‌ಗಳ ಮೂಲಕ ಬರೋಬ್ಬರಿ ₹6,060 ಕೋಟಿ ಸಂಗ್ರಹಿಸಿದ್ದು, ಅದರಲ್ಲಿ ಇಡಿ-ಐಟಿ ತನಿಖೆ ಎದುರಿಸುತ್ತಿದ್ದ ಕಂಪನಿಗಳಿಂದಲೇ ₹2746 ಕೋಟಿಗೂ ಹೆಚ್ಚು ದೊಡ್ಡ ಮೊತ್ತದ ದೇಣಿಗೆ ಪಡೆದಿದ್ದೀರಿ. ಈ ಭ್ರಷ್ಟ ಹಣವನ್ನೇ ನೀವು ಬೇರೆ ರಾಜ್ಯಗಳ ಚುನಾವಣೆಗೆ ಬಳಸುತ್ತಿರುವುದು ಅಲ್ಲವೇ?

ನೀವು ನಮಗೆ ಪಾಠ ಹೇಳುವ ನೈತಿಕತೆ ಉಳಿಸಿಕೊಂಡಿಲ್ಲ. ಮೊದಲು ನಿಮ್ಮ ಆಡಳಿತದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಬಿಜೆಪಿ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರಧಾನಿ ಮೋದಿ ಸರ್ಕಾರಕ್ಕೆ ಲೋಕಸಭೆಯಲ್ಲೇ ಸೋಲು – ಮೀಸಲಾತಿ ಮಸೂದೆ ತಿರಸ್ಕಾರ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ...

ಬ್ರಿಟನ್‌ ಪೌರತ್ವ: ರಾಹುಲ್‌ ಗಾಂಧಿ ವಿರುದ್ಧ FIR ದಾಖಲಿಸಿ ತನಿಖೆಗೆ ಸೂಚನೆ

ಭಾರತದ ಪೌರತ್ವದ ಜೊತೆಗೆ ಬ್ರಿಟನ್‌ನ ಪೌರತ್ವವನ್ನು ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ...

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವನಪರ್ಯಂತ ಜೈಲು – ಕೋರ್ಟ್‌ ತೀರ್ಪು

ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ....

ಕರ್ನಾಟಕದ ಲೋಕಸಭಾ ಸ್ಥಾನಗಳ ಸಂಖ್ಯೆ ಹೆಚ್ಚಳ, ಆದರೆ ಪ್ರಾತಿನಿಧ್ಯ ಇಳಿಕೆ..!

ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆಯಿಂದಾಗಿ ಕರ್ನಾಟಕದಲ್ಲೂ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಹೆಚ್ಚಳವಾಗಲಿದೆ. ಲೋಕಸಭಾ...