ಬಿಹಾರ ವಿಧಾನಸಭಾ ಚುನಾವಣೆಯಲ್ಲಿ (Bihar Assembly Election) ಆರ್‌ಜೆಡಿ (RJD), ಕಾಂಗ್ರೆಸ್ (Congress) ಒಳಗೊಂಡಂ ಮಹಾಘಟಬಂಧನ್ (MGB) ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದೆ.
ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ (Tejashwi Yadav) ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿಯಾಗಲಿದ್ದಾರೆ.
ಮಹಾಘಟಬಂಧನ್‌ನ ಪ್ರಮುಖ ಪಾಲುದಾರ ಪಕ್ಷ ವಿಕಸಿತ್ ಇನ್ಸಾಫ್ ಪಕ್ಷದ (VIP) ನಾಯಕ ಮುಕೇಶ್ ಸಹಾನಿ (Mukesh Sahani) ಉಪ ಮುಖ್ಯಮಂತ್ರಿಯಾಗಲಿದ್ದಾರೆ.
ಬಿಹಾರ ರಾಜಧಾನಿ ಪಾಟ್ನಾದಲ್ಲಿ ಬಿಹಾರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ನಿಯೋಜನೆಗೊಂಡಿರುವ ಹಿರಿಯ ವೀಕ್ಷಕ ಅಶೋಕ್ ಗೆಹ್ಲೋಟ್, ಬಿಹಾರ ಕಾಂಗ್ರೆಸ್ ಉಸ್ತುವಾರಿ ಕೃಷ್ಣ ಅಲ್ಲವಾರು, ಬಿಹಾರ ಕಾಂಗ್ರೆಸ್ ಮುಖ್ಯಸ್ಥ ರಾಜೇಶ್ ರಾಮ್, ತೇಜಸ್ವಿ ಯಾದವ್, ಮುಖೇಶ್ ಸಹಾನಿ, ಎಡ ಪಕ್ಷಗಳ ನಾಯಕರ ಸಮ್ಮುಖದಲ್ಲಿ ಈ ಘೋಷಣೆ ಮಾಡಲಾಯಿತು.
ಎರಡನೇ ಉಪ ಮುಖ್ಯಮಂತ್ರಿ ಅಭ್ಯರ್ಥಿಯನ್ನೂ ಶೀಘ್ರವೇ ಘೋಷಣೆ ಮಾಡ್ತೀವಿ ಎಂದು ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ವಿಚಿತ್ರ ಎಂದರೆ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಆರ್‌ಜೆಡಿ ಅಭ್ಯರ್ಥಿಗಳು ಮುಖಾಮುಖಿಯಾಗಿ ಸ್ಪರ್ಧೆ ಮಾಡುತ್ತಿದ್ದಾರೆ. ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮತ್ತೊಂದು ಪಾಲುದಾರ ಪಕ್ಷ ಸಿಪಿಐನ ಅಭ್ಯರ್ಥಿಗಳ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.


