ಬಿಹಾರದ (Bihar Assembly Election) ಬಳಿಕ ಈಗ ದೇಶಾದ್ಯಂತ ಮತದಾರರ ಪಟ್ಟಿ ( ಪರಿಷ್ಕರಣೆಗಾಗಿ ವಿಶೇಷ ತೀವ್ರ ಸ್ವರೂಪದ ಪರಿಷ್ಕರಣೆ ಅಭಿಯಾನಕ್ಕೆ (Special Intensive Revision (SIR) ಭಾರತೀಯ ಚುನಾವಣಾ ಆಯೋಗ ತೀರ್ಮಾನ ಕೈಗೊಂಡಿದೆ.
ಮೊದಲ ಹಂತದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ 1 ಕೇಂದ್ರಾಡಳಿತ ಪ್ರದೇಶ ಮತ್ತು 10 ರಾಜ್ಯಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತದೆ.
ಮುಂದಿನ ವರ್ಷ ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಜೊತೆಗೆ ಈಶಾನ್ಯ ರಾಜ್ಯ ಅಸ್ಸಾಂನಲ್ಲೂ ಮೊದಲ ಹಂತದಲ್ಲೇ ಮತದಾರರ ಪಟ್ಟಿ ಪರಿಷ್ಕರಣೆ ನಡೆಯಲಿದೆ.
ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಭಾರತೀಯ ಚುನಾವಣಾ ಮುಖ್ಯ ಆಯುಕ್ತರು ಮತ್ತು ಆಯುಕ್ತರು ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳ ಎರಡು ದಿನಗಳ ಸಮ್ಮೇಳನದಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ.
ಜೊತೆಗೆ ವಿಧಾನಸಭಾ ಚುನಾವಣೆ ನಡೆಯಲಿರುವ ಅಸ್ಸಾಂ, ಕೇರಳ, ತಮಿಳುನಾಡು, ಪುದುಚೇರಿ ಮತ್ತು ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾಧಿಕಾರಿಗಳ ಜೊತೆಗೆ ಪ್ರತ್ಯೇಕ-ಪ್ರತ್ಯೇಕ ಸಭೆಗಳನ್ನೂ ನಡೆಸಲಾಯಿತು.
ಕಳೆದ ತಿಂಗಳ ಸೆಪ್ಟೆಂಬರ್ 10ರಂದು ಎಸ್‌ಐಆರ್ ಸಿದ್ಧತೆ ಸಂಬಂಧ ಚುನಾವಣಾ ಆಯೋಗ ಎಲ್ಲಾ ಸಿಇಒಗಳ ಜೊತೆಗೆ ಸಭೆ ನಡೆಸಿತ್ತು.


