ಬೆಂಗಳೂರು-ಮುಂಬೈಗೆ (Bengaluru-Mumbai) ಸಂಚರಿಸುವ ಸೂಪರ್‌ಫಾಸ್ಟ್ ರೈಲು (Super Fast Rail) ದಾವಣೆಗೆರೆ (Davanagere), ಹುಬ್ಬಳ್ಳಿ (Hubli) ಮತ್ತು ಬೆಳಗಾವಿ (Belagavi) ಮೂಲಕ ಹೊಸ ರೈಲು ಸಂಚರಿಸುವುದಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅನುಮೋದನೆ ನೀಡಿದ್ದಾರೆ.
ಅಕ್ಟೋಬರ್ 10ರಂದು ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದ ಸಂಸದರೂ ಆಗಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಪತ್ರ ಬರೆದಿದ್ದರು.
ನಮ್ಮ ಹುಬ್ಬಳ್ಳಿ-ಧಾರವಾಡ ಮೂಲಕ ಸಂಚರಿಸುವ ಬೆಂಗಳೂರು- ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಅನುಮೋದನೆ ಪತ್ರವನ್ನು ನೀಡಿದ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ @AshwiniVaishnawಅವರಿಗೆ ಅನಂತ ಧನ್ಯವಾದಗಳು.
ನಮ್ಮ ಬಹುದಿನದ ಬೇಡಿಕೆಯಾಗಿದ್ದ ಈ ರೈಲಿಗಾಗಿ ನಾನು ಕೇಂದ್ರ ರೇಲ್ವೆ ಸಚಿವರಿಗೆ ವಿನಂತಿಸಿದ್ದೆ. ಈ ಸೂಪರ್ ಫಾಸ್ಟ್ ರೈಲು ಕರ್ನಾಟಕದ ಮಧ್ಯಭಾಗ ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಾರ್ಗವಾಗಿ ವಾಣಿಜ್ಯ ನಗರಿ ಮುಂಬೈಗೆ ಸಂಚಾರಿಸಲಿದ್ದು, ಲಕ್ಷಾಂತರ ಜನರಿಗೆ ಈ ರೈಲು ಸಂಚಾರದಿಂದ ಅನುಕೂಲವಾಗಲಿದೆ ಹಾಗೂ ವ್ಯಾಪಾರ ವಹಿವಾಟು ಮತ್ತಷ್ಟು ವೃದ್ಧಿಯಾಗಲಿದೆ.
ಈ ಹೊಸ ರೈಲು ಪ್ರಾರಂಭಿಸಲು ಅನುವು ಮಾಡಿಕೊಟ್ಟ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು @narendramodi ಮತ್ತು ಆತ್ಮೀಯ ಸಹೋದ್ಯೋಗಿ ಮಿತ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್, ರೈಲ್ವೆ ರಾಜ್ಯ ಸಚಿವ ಶ್ರೀ ವಿ. ಸೋಮಣ್ಣ @VSOMANNA_BJP ಅವರಿಗೆ ಅನಂತ ಧನ್ಯವಾದಗಳು
ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಧನ್ಯವಾದ ಸಲ್ಲಿಸಿದ್ದಾರೆ.


