CM ಹೇಳಿದ ಮೇಲೆ ಮುಗಿಯಿತು – DCM DK ಶಿವಕುಮಾರ್

“ಸಿಎಂ ಅವರು ಹೇಳಿದ ಮೇಲೆ ಮುಗಿಯಿತು. ಅವರು ಹೇಳಿದ ಮೇಲೆ ಇನ್ನೇನಿದೆ? ಅವರು ಹೇಗೆ ಹೇಳುತ್ತಾರೋ ಹಾಗೆ ನಾವು ಕೇಳುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಸೋಮವಾರ ಪ್ರತಿಕ್ರಿಯಿಸಿದರು.

“ಹೈಕಮಾಂಡ್ ಒಪ್ಪಿದರೇ ನಾನೇ ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತೇನೆ” ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು ಈ ರೀತಿ ಉತ್ತರಿಸಿದರು.

ದೆಹಲಿಗೆ ಖಾಸಗಿ ಭೇಟಿ:

ದೆಹಲಿ ಭೇಟಿ ಬಗ್ಗೆ ಕೇಳಿದಾಗ, “ನಮ್ಮ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯೆಯಾದ ಅಂಬಿಕಾ ಸೋನಿಯವರ ಮನೆಗೆ ಭೇಟಿ ನೀಡಿದ್ದೆ. ಅವರ ಪತಿ ತೀರಿಕೊಂಡಿದ್ದರು. ಹೀಗಾಗಿ ಸಂತಾಪ ಸೂಚಿಸಲು ಅವರ ಮನೆಗೆ ಭೇಟಿ ನೀಡಿದ್ದೆ. ನಾನು ತಿಹಾರ್ ಜೈಲಿನಲ್ಲಿದ್ದಾಗ ಅವರು ಸೋನಿಯಗಾಂಧಿ ಅವರ ಜೊತೆ ಬಂದು ನನ್ನನ್ನು ಭೇಟಿ ಮಾಡಿದ್ದರು. ನನಗೂ ಅವರಿಗೂ ಬಹಳ ಆತ್ಮೀಯತೆ. ನಮ್ಮ ಪಕ್ಷದ ನಾಯಕರು ಅವರು. ಎಸ್.ಎಂ.ಕೃಷ್ಣ ಅವರು ಅಧಿಕಾರದಲ್ಲಿದ್ದಾಗ ನಮಗೆ ಪ್ರಧಾನ ಕಾರ್ಯದರ್ಶಿಯಾಗಿದ್ದರು. ನನ್ನನ್ನು ತಮ್ಮನಂತೆ ಕಂಡಿದ್ದರು, ನನ್ನ ಕೆಲಸಗಳಿಗೆ ಪ್ರೋತ್ಸಾಹ ನೀಡುತ್ತಿದ್ದರು. ಹಾಗಾಗಿ ನಾನು ಅವರ ಮನೆಗೆ ಭೇಟಿ ನೀಡಿದ್ದೆ” ಎಂದು ತಿಳಿಸಿದರು.

ನೀವು ಹೈಕಮಾಂಡ್ ಭೇಟಿಗೆ ದಿಲ್ಲಿಗೆ ಹೋಗಿದ್ದಿರಿ ಎಂದು ಚರ್ಚೆಯಾಗುತ್ತಿದೆಯಲ್ಲ ಎಂದು ಕೇಳಿದಾಗ, “ನಾನು ದಿಲ್ಲಿಗೆ ಹೋಗಿದ್ದ ವಿಷಯ, ಕೆಲಸದ ಬಗ್ಗೆ ಮಾತ್ರ ಹೇಳಬಲ್ಲೆ. ಹೈಕಮಾಂಡ್ ಭೇಟಿ ಬಗ್ಗೆ ನೀವು ಮಾಧ್ಯಮದವರು, ಸಾರ್ವಜನಿಕರು, ಇನ್ನೂ ಬೇರೆಯವರು ಏನು ಬೇಕಾದರೂ ಚರ್ಚೆ ಮಾಡಿಕೊಳ್ಳಿ. ಯಾರು ಬೇಕಾದರೂ ಮಾತಾಡಿಕೊಳ್ಳಲಿ. ನನಗದು ಸಂಬಂಧ ಪಡದ ವಿಷಯ” ಎಂದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರಧಾನಿ ಮೋದಿ ಸರ್ಕಾರಕ್ಕೆ ಲೋಕಸಭೆಯಲ್ಲೇ ಸೋಲು – ಮೀಸಲಾತಿ ಮಸೂದೆ ತಿರಸ್ಕಾರ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ...

ಬ್ರಿಟನ್‌ ಪೌರತ್ವ: ರಾಹುಲ್‌ ಗಾಂಧಿ ವಿರುದ್ಧ FIR ದಾಖಲಿಸಿ ತನಿಖೆಗೆ ಸೂಚನೆ

ಭಾರತದ ಪೌರತ್ವದ ಜೊತೆಗೆ ಬ್ರಿಟನ್‌ನ ಪೌರತ್ವವನ್ನು ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ...

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವನಪರ್ಯಂತ ಜೈಲು – ಕೋರ್ಟ್‌ ತೀರ್ಪು

ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ....

ಕರ್ನಾಟಕದ ಲೋಕಸಭಾ ಸ್ಥಾನಗಳ ಸಂಖ್ಯೆ ಹೆಚ್ಚಳ, ಆದರೆ ಪ್ರಾತಿನಿಧ್ಯ ಇಳಿಕೆ..!

ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆಯಿಂದಾಗಿ ಕರ್ನಾಟಕದಲ್ಲೂ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಹೆಚ್ಚಳವಾಗಲಿದೆ. ಲೋಕಸಭಾ...