ಒಂದು ವಾರದೊಳಗೆ ಎಲ್ಲಾ PGಗಳು (Paying Guest) ಉದ್ದಿಮೆ ಪರವಾನಿಗೆ ಪತ್ರವನ್ನು ಪಡೆದುಕೊಳ್ಳಬೇಕು ಎಂದು ಬೆಂಗಳೂರು ಪೂರ್ವ ನಗರ ಪಾಲಿಕೆಯ ಅಪರ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ ಅನಧಿಕೃತ ಪೇಯಿಂಗ್ ಗೆಸ್ಟ್(PG)ಗಳ ಮಾಲೀಕರಿಗೆ ಅಂತಿಮ ಎಚ್ಚರಿಕೆಯನ್ನು ನೀಡುತ್ತಿದ್ದೇವೆ. ಕಡ್ಡಾಯ ಉದ್ದಿಮೆ ಪರವಾನಿಗೆ ಪತ್ರ ಇಲ್ಲದೆಯೇ ಮತ್ತು ಇತರೆ ನಿಯಮಗಳನ್ನು ಉಲ್ಲಂಘಿಸಿ ದೊಡ್ಡ ಪ್ರಮಾಣದಲ್ಲಿ ಪಿಜಿಗಳನ್ನು ನಡೆಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ.
1) ಜನವಸತಿ ಪ್ರದೇಶಗಳಲ್ಲಿ ಅನುಮತಿ ಇಲ್ಲದೇ ಕಾರ್ಯನಿರ್ವಹಿಸುತ್ತಿರುವುದು
2) ಮೂಲಭೂತ ಸುರಕ್ಷತೆ ಮತ್ತು ಸ್ವಚ್ಛತೆಯ ಸೌಲಭ್ಯಗಳನ್ನು ನೀಡದೇ ಇರುವುದು
3) ಅಗ್ನಿ ಸುರಕ್ಷತೆ ನಿಯಮಗಳ ಉಲ್ಲಂಘನೆ
4) ಕಡ್ಡಾಯವಾಗಿ ಸಿಸಿಟಿವಿ ಅಳವಡಿಕೆಗೆ ವಿಫಲ
ಒಂದು ವೇಳೆ 7 ದಿನದೊಳಗೆ ಅಗತ್ಯ ಉದ್ದಿಮೆ ಪರವಾನಿಗೆ, ಅಗ್ನಿ ಸುರಕ್ಷತೆ ಪ್ರಮಾಣಪತ್ರ ಒಳಗೊಂಡಂತೆ ನಿಯಮಗಳನ್ನು ಪಾಲನೆ ಮಾಡದೇ ಹೋದಲ್ಲಿ ಅಂತರ ಪಿಜಿಗಳ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ, ದಂಡ ವಿಧಿಸಲಾಗುತ್ತದೆ ಮತ್ತು ಅಂತಹ ಪಿಜಿಗಳನ್ನು ಮುಚ್ಚಲಾಗುತ್ತದೆ ಎಂದು ಬೆಂಗಳೂರು ಪೂರ್ವ ನಗರ ಪಾಲಿಕೆಯ ವಿಶೇಷ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.


