ಎರಡು ಆನೆಗಳ ಸಾವು – ತನಿಖೆಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಆದೇಶ

ಬೆಳಗಾವಿ (Belagavi) ಜಿಲ್ಲೆಯಲ್ಲಿ ಎರಡು ಕಾಡಾನೆಗಳ (Wild Elephants) ಸಾವಿನ ಸಂಬಂಧ ಅರಣ್ಯ ಸಚಿವ (Forest Minister) ಈಶ್ವರ್‌ ಖಂಡ್ರೆ (Eshwar Khandre) ಅವರು ತನಿಖೆಗೆ ಆದೇಶಿಸಿದ್ದಾರೆ.

ಬೆಳಗಾವಿ ಜಿಲ್ಲೆ ಖಾನಾಪುರ ಬಳಿ ಸುಳೇಗಾಳಿ ಗ್ರಾಮದಲ್ಲಿ ವಿದ್ಯುತ್‌ ಸ್ಪರ್ಶದಿಂದ ಎರಡು ಆನೆಗಳು ಸಾವಿಗೀಡಾಗಿರುವುದು ನೋವಿನ ಸಂಗತಿ. ಕಳೆದ ಕೆಲವು ದಿನಗಳಿಂದ ಆನೆಗಳು ಇದೇ ಪ್ರದೇಶದಲ್ಲಿ ಓಡಾಡುತ್ತಿದ್ದರೂ ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿ ಸೂಕ್ತ ಕ್ರಮಕೈಗೊಳ್ಳದೇ ಕರ್ತವ್ಯ ಲೋಪ ಮಾಡಿರುವುದೇ ಆನೆಗಳ ಸಾವಿಗೆ ಕಾರಣ ಎಂಬ ಆರೋಪವಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಬೇಲಿಗೆ ವಿದ್ಯುತ್‌ ಸಂಪರ್ಕ ನೀಡಿ ಆನೆಗಳ ಸಾವಿಗೆ ಕಾರಣರಾದವರ ವಿರುದ್ಧ ಕಾನೂನು ರೀತ್ಯ ಪ್ರಕರಣ ದಾಖಲಿಸಲು ಮತ್ತು ಒಂದೊಮ್ಮೆ ಅರಣ್ಯ ಅಧಿಕಾರಿ, ಸಿಬ್ಬಂದಿಯ ಲೋಪ ಇದ್ದಲ್ಲಿ ಶಿಸ್ತುಕ್ರಮದ ಶಿಫಾರಸ್ಸಿನೊಂದಿಗೆ 5 ದಿನಗಳ ಒಳಗಾಗಿ ವರದಿ ಸಲ್ಲಿಸುವಂತೆ

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಪತ್ರ ಮುಖೇನ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗಿರೀಶ್‌ ಮಟ್ಟಣ್ಣನವರ್‌ ವಿರುದ್ಧ ತನಿಖೆಗೆ ಆದೇಶ

ಗಿರೀಶ್‌ ಮಟ್ಟಣ್ಣನವರ್‌ (Girish Mattannanavar) ವಿರುದ್ಧ ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ...

ಭೂತಾನ್‌ ಪ್ರವಾಸಕ್ಕೆ ಹೊರಟ ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (Prime Minister Narendra Modi) ಇವತ್ತಿನಿಂದ...

ಹಾಸನದ ಜನಪ್ರಿಯ ಆಸ್ಪತ್ರೆ ಮಾಲೀಕ ಡಾ.ಅಬ್ದುಲ್‌ ಬಶೀರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲು

ನ್ಯಾಯಾಲಯಕ್ಕೆ ಸುಳ್ಳು ಸಾಕ್ಷ್ಯ ಮತ್ತು ಸುಳ್ಳು ದಾಖಲೆಗಳನ್ನು ಸಲ್ಲಿಸಿದ ಆರೋಪದಡಿಯಲ್ಲಿ ಹಾಸನ...

ದೆಹಲಿ ಕೆಂಪುಕೋಟೆ ಬಳಿ ಸ್ಫೋಟ – 8 ಸಾವು

ದೆಹಲಿಯ ಕೆಂಪುಕೋಟೆಯಲ್ಲಿ ಸಂಭವಿಸಿರುವ ಕಾರ್‌ ಬಾಂಬ್‌ ಸ್ಫೋಟದಲ್ಲಿ 8 ಮಂದಿ ಪ್ರಾಣ...