GBA Election: ವಾರ್ಡ್‌ವಾರು ಮೀಸಲಾತಿ ಪ್ರಕಟಿಸಿ – ಸುಪ್ರೀಂಕೋರ್ಟ್‌ ಆದೇಶ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (Greater Bengaluru Authority) ವ್ಯಾಪ್ತಿಯಲ್ಲಿರುವ ಐದು ಮಹಾನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಡಿಸೆಂಬರ್‌ 15ರೊಳಗೆ ವಾರ್ಡ್‌ವಾರು ಮೀಸಲಾತಿಯ (Ward Wise Reservation) ಅಧಿಸೂಚನೆ ಪ್ರಕಟಿಸುವಂತೆ ಸುಪ್ರೀಂಕೋರ್ಟ್‌ (Supreme Court) ಕರ್ನಾಟಕ ಸರ್ಕಾರಕ್ಕೆ (State Of Karnataka) ಸೂಚಿಸಿದೆ.

ನವೆಂಬರ್‌ 15ರೊಳಗೆ ವಾರ್ಡ್‌ವಾರು ಪುನರ್‌ವಿಂಗಡನೆ (Ward Delimitation) ಪೂರ್ಣಗೊಳ್ಳಬೇಕು ಮತ್ತು ಡಿಸೆಂಬರ್‌ 15ರೊಳಗೆ ವಾರ್ಡ್‌ವಾರು ಮೀಸಲಾತಿ ಅಧಿಸೂಚನೆ ಪ್ರಕಟವಾಗಬೇಕು ಎಂದು ನ್ಯಾಯಮೂರ್ತಿ ಸೂರ್ಯಕಾಂತ್‌ (JUSTICE SURYA KANT), ನ್ಯಾಯಮೂರ್ತಿ ಉಜ್ವಲ್‌ ಭುಯಾನ್‌ (JUSTICE UJJAL BHUYAN), ನ್ಯಾಯಮೂರ್ತಿ ಜಾಯ್‌ಮಲ್ಯ ಬಾಗ್ಚಿ (JUSTICE JOYMALYA BAGCHI )ಅವರಿದ್ದ ಮೂವರು ನ್ಯಾಯಮೂರ್ತಿಗಳ ಸುಪ್ರೀಂಕೋರ್ಟ್‌ (Supreme Court) ಪೀಠ ಆದೇಶಿಸಿದೆ.

ಮುಂದಿನ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಜನವರಿ 12, 2026ಕ್ಕೆ ಮುಂದೂಡಿದೆ.

ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ಗಣತಿ ಹಿನ್ನೆಲೆಯಲ್ಲಿ ಕ್ಷೇತ್ರ ಪುನರ್‌ವಿಂಗಡನೆಗೆ 15 ದಿನಗಳ ಹೆಚ್ಚುವರಿ ಕಾಲಾವಕಾಶ ನೀಡುವಂತೆ ಸುಪ್ರೀಂಕೋರ್ಟ್‌ಗೆ (Supreme Court) ಕರ್ನಾಟಕ ಸರ್ಕಾರ (State Of Karnataka) ಮನವಿ ಮಾಡಿಕೊಂಡಿತ್ತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗಿರೀಶ್‌ ಮಟ್ಟಣ್ಣನವರ್‌ ವಿರುದ್ಧ ತನಿಖೆಗೆ ಆದೇಶ

ಗಿರೀಶ್‌ ಮಟ್ಟಣ್ಣನವರ್‌ (Girish Mattannanavar) ವಿರುದ್ಧ ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ...

ಭೂತಾನ್‌ ಪ್ರವಾಸಕ್ಕೆ ಹೊರಟ ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (Prime Minister Narendra Modi) ಇವತ್ತಿನಿಂದ...

ಹಾಸನದ ಜನಪ್ರಿಯ ಆಸ್ಪತ್ರೆ ಮಾಲೀಕ ಡಾ.ಅಬ್ದುಲ್‌ ಬಶೀರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲು

ನ್ಯಾಯಾಲಯಕ್ಕೆ ಸುಳ್ಳು ಸಾಕ್ಷ್ಯ ಮತ್ತು ಸುಳ್ಳು ದಾಖಲೆಗಳನ್ನು ಸಲ್ಲಿಸಿದ ಆರೋಪದಡಿಯಲ್ಲಿ ಹಾಸನ...

ದೆಹಲಿ ಕೆಂಪುಕೋಟೆ ಬಳಿ ಸ್ಫೋಟ – 8 ಸಾವು

ದೆಹಲಿಯ ಕೆಂಪುಕೋಟೆಯಲ್ಲಿ ಸಂಭವಿಸಿರುವ ಕಾರ್‌ ಬಾಂಬ್‌ ಸ್ಫೋಟದಲ್ಲಿ 8 ಮಂದಿ ಪ್ರಾಣ...