ಬೆಂಗಳೂರು (Bengaluru) ಮತ್ತು ಕರ್ನಾಟಕದ (Karnataka) ಇತರೆ ಕಡೆಗಳಲ್ಲಿ ಕೆಲಸ ಮಾಡುತ್ತಿರುವ ಬಿಹಾರ (Bihar) ಮೂಲದ ಕಾರ್ಮಿಕರಿಗೆ ಮೂರು ದಿನಗಳ ವೇತನ ಸಹಿತ ರಜೆಯನ್ನು ನೀಡುವಂತೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DCM D.K.Shivakumar) ಮನವಿ ಮಾಡಿದ್ದಾರೆ.
ಬಿಹಾರ ರಾಜ್ಯದ ಸಾರ್ವತ್ರಿಕ ಚುನಾವಣೆ-2025 ನವೆಂಬರ್ ಮಾಹೆಯ ದಿನಾಂಕ 6 ಮತ್ತು 11ರಂದು ನಡೆಯಲಿದೆ. ಬಿಹಾರ ನಿವಾಸಿಗಳು ಸಾಕಷ್ಟು ಸಂಖ್ಯೆಯಲ್ಲಿ ಬೆಂಗಳೂರು ಮತ್ತು ಕರ್ನಾಟಕದ ವಿವಿಧ ಭಾಗಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲಾ ಕಂಪನಿಗಳು, ವಾಣಿಜ್ಯ ಉದ್ಯಮಿಗಳು, ಹೋಟೆಲ್‌ಗಳು, ಗುತ್ತಿಗೆದಾರರು, ಬಿಲ್ಡರ್‌ಗಳು, ಅಂಗಡಿ-ಮುಂಗಟ್ಟುಗಳು ಮತ್ತು ಇತರೆ ಉದ್ದಿಮೆದಾರರು ಬಿಹಾರ ರಾಜ್ಯದ ಸಾರ್ವತ್ರಿಕ ಚುನಾವಣೆಯಲ್ಲಿ ಮತವನ್ನು ಚಲಾಯಿಸಲು ಅನುವಾಗುವಂತೆ ಬಿಹಾರ ರಾಜ್ಯದ ಮತದಾರರಾದವರಿಗೆ ಕನಿಷ್ಠ ಮೂರು ದಿನಗಳ ವೇತನ ಸಹಿತ ರಜೆಯನ್ನು ನೀಡಲು ಮತ್ತು ಚುನಾವಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸಹಕರಿಸಲು ಕೋರುತ್ತೇನೆ
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.


