ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್ ವೈ ಮೇಟಿ (Bagalkote Congress MLA H.Y.Meti) ನಿಧನರಾಗಿದ್ದಾರೆ.
ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಮೇಟಿಯವರು (MLA H.Y.Meti) ಕಳೆದ 1 ವಾರದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
2013ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ (Chief Minister Siddaramaiah) ಮೊದಲ ಅವಧಿಯ ಸರ್ಕಾರದಲ್ಲಿ ಅಬಕಾರಿ ಸಚಿವರಾಗಿದ್ದರು. ಆದರೆ 2016ರಲ್ಲಿ ಸೆಕ್ಸ್ ಸಿಡಿ ಬಯಲಾದ ಬಳಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಮೂಲತಃ ಜನತಾ ಪರಿವಾರದ ಮೇಟಿ ಗುಳೇದಗುಡ್ಡ (Guledagudda Assembly) ವಿಧಾನಸಭಾ ಕ್ಷೇತ್ರದಿಂದ 2 ಬಾರಿ ಮತ್ತು ಬಾಗಲಕೋಟೆ ವಿಧಾನಸಭಾ (Bagalkote Assembly) ಕ್ಷೇತ್ರದಿಂದ 2 ಬಾರಿ ಶಾಸಕರಾಗಿದ್ದರು. ಜೊತೆಗೆ 1 ಬಾರಿ ಬಾಗಲಕೋಟೆ ಲೋಕಸಭಾ ಕ್ಷೇತ್ರದ (Bagalkote) ಸಂಸದರೂ (MP) ಆಗಿದ್ದರು.
ಈ ಬಾರಿ ಇವರನ್ನು ಸಿಎಂ ಸಿದ್ದರಾಮಯ್ಯ (Chief Minister Siddaramaiah) ಅವರು ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ:
ಮಾಜಿ ಸಚಿವರು, ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರು, ಹಾಲಿ ಶಾಸಕರೂ ಆದ ಹೆಚ್.ವೈ.ಮೇಟಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕಳೆದ ಗುರುವಾರವಷ್ಟೇ ಆಸ್ಪತ್ರೆಗೆ ಭೇಟಿನೀಡಿ, ಅವರ ಆರೋಗ್ಯ ವಿಚಾರಿಸಿದ್ದೆ. ಈ ವೇಳೆ ಗುಣಮುಖರಾಗಿ ಮತ್ತೆ ನಮ್ಮನ್ನು ಕೂಡಿಕೊಳ್ಳುತ್ತಾರೆ ಎನ್ನುವ ಭರವಸೆಯಿತ್ತು. ನನ್ನ ಭರವಸೆ, ಹಾರೈಕೆಗಳೆರೆಡೂ ಹುಸಿಯಾಗಿದೆ. ಬಹುದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕರು. ಅವರ ನಿಧನದಿಂದ ಸಮಾಜ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಮೇಟಿಯವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ.
ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಸಂತಾಪ ಸೂಚಿಸಿದ್ದಾರೆ.


