MLA H.Y. ಮೇಟಿ ನಿಧನ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್‌ ವೈ ಮೇಟಿ (Bagalkote Congress MLA H.Y.Meti) ನಿಧನರಾಗಿದ್ದಾರೆ.

ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಮೇಟಿಯವರು (MLA H.Y.Meti) ಕಳೆದ 1 ವಾರದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

2013ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ (Chief Minister Siddaramaiah) ಮೊದಲ ಅವಧಿಯ ಸರ್ಕಾರದಲ್ಲಿ ಅಬಕಾರಿ ಸಚಿವರಾಗಿದ್ದರು. ಆದರೆ 2016ರಲ್ಲಿ ಸೆಕ್ಸ್‌ ಸಿಡಿ ಬಯಲಾದ ಬಳಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಮೂಲತಃ ಜನತಾ ಪರಿವಾರದ ಮೇಟಿ ಗುಳೇದಗುಡ್ಡ (Guledagudda Assembly) ವಿಧಾನಸಭಾ ಕ್ಷೇತ್ರದಿಂದ 2 ಬಾರಿ ಮತ್ತು ಬಾಗಲಕೋಟೆ ವಿಧಾನಸಭಾ (Bagalkote Assembly) ಕ್ಷೇತ್ರದಿಂದ 2 ಬಾರಿ ಶಾಸಕರಾಗಿದ್ದರು. ಜೊತೆಗೆ 1 ಬಾರಿ ಬಾಗಲಕೋಟೆ ಲೋಕಸಭಾ ಕ್ಷೇತ್ರದ (Bagalkote) ಸಂಸದರೂ (MP) ಆಗಿದ್ದರು.

ಈ ಬಾರಿ ಇವರನ್ನು ಸಿಎಂ ಸಿದ್ದರಾಮಯ್ಯ (Chief Minister Siddaramaiah) ಅವರು ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ:

ಮಾಜಿ ಸಚಿವರು, ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರು, ಹಾಲಿ ಶಾಸಕರೂ ಆದ ಹೆಚ್.ವೈ.ಮೇಟಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕಳೆದ ಗುರುವಾರವಷ್ಟೇ ಆಸ್ಪತ್ರೆಗೆ ಭೇಟಿನೀಡಿ, ಅವರ ಆರೋಗ್ಯ ವಿಚಾರಿಸಿದ್ದೆ. ಈ ವೇಳೆ ಗುಣಮುಖರಾಗಿ ಮತ್ತೆ ನಮ್ಮನ್ನು ಕೂಡಿಕೊಳ್ಳುತ್ತಾರೆ ಎನ್ನುವ ಭರವಸೆಯಿತ್ತು. ನನ್ನ ಭರವಸೆ, ಹಾರೈಕೆಗಳೆರೆಡೂ ಹುಸಿಯಾಗಿದೆ. ಬಹುದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕರು. ಅವರ ನಿಧನದಿಂದ ಸಮಾಜ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಮೇಟಿಯವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ.

ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರತಿಕ್ಷಣ Exclusive: ಲೆಕ್ಸಿಂಗ್‌ಟನ್‌ ಆಸ್ಪತ್ರೆ ವಿರುದ್ಧ ತನಿಖಾ ವರದಿ ಸಲ್ಲಿಕೆ, ಇನ್ನೂ ಬಂದಿಲ್ಲ ಎಂದ DHO ಕಚೇರಿ..! ಸುಳ್ಳು ಹೇಳ್ತಿರೋದು ಯಾರು..?

ಬೆಂಗಳೂರಿನ ರಾಜಾಜಿನಗರದಲ್ಲಿರುವ ಖಾಸಗಿ ಆಸ್ಪತ್ರೆ ಕೆಪಿಎಂಇ ನಿಯಮಗಳನ್ನು ಉಲ್ಲಂಘಿಸಿ ನಡೆಯುತ್ತಿದೆ ಎಂಬ...

ಪ್ರಧಾನಿ ಮೋದಿ ಸರ್ಕಾರಕ್ಕೆ ಲೋಕಸಭೆಯಲ್ಲೇ ಸೋಲು – ಮೀಸಲಾತಿ ಮಸೂದೆ ತಿರಸ್ಕಾರ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ...

ಬ್ರಿಟನ್‌ ಪೌರತ್ವ: ರಾಹುಲ್‌ ಗಾಂಧಿ ವಿರುದ್ಧ FIR ದಾಖಲಿಸಿ ತನಿಖೆಗೆ ಸೂಚನೆ

ಭಾರತದ ಪೌರತ್ವದ ಜೊತೆಗೆ ಬ್ರಿಟನ್‌ನ ಪೌರತ್ವವನ್ನು ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ...

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವನಪರ್ಯಂತ ಜೈಲು – ಕೋರ್ಟ್‌ ತೀರ್ಪು

ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ....