ಗಿರೀಶ್‌ ಮಟ್ಟಣ್ಣನವರ್‌ ವಿರುದ್ಧ ತನಿಖೆಗೆ ಆದೇಶ

ಗಿರೀಶ್‌ ಮಟ್ಟಣ್ಣನವರ್‌ (Girish Mattannanavar) ವಿರುದ್ಧ ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ಕರ್ನಾಟಕ ಹೈಕೋರ್ಟ್‌ (Karnataka High Court) ನಿರ್ದೇಶನ ನೀಡಿದೆ.

ಗಿರೀಶ್‌ ಮಟ್ಟಣ್ಣನವರ್‌ ವಿರುದ್ಧ ದೂರು ಸಲ್ಲಿಕೆಯಾದರೂ ತನಿಖೆ ಕೈಗೊಳ್ಳದ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ಹೈಕೋರ್ಟ್‌ ಆಯೋಗಕ್ಕೆ ಸೂಚಿಸಿದೆ.

ಧರ್ಮಸ್ಥಳದಲ್ಲಿ ನಡೆಯುವ ಸಾಮೂಹಿಕ ವಿವಾಹ ಮತ್ತು ಅಲ್ಲಿ ಮದುವೆಯಾಗುವ ಹೆಣ್ಣು ಮಕ್ಕಳ ವಿರುದ್ಧ ಗಿರೀಶ್‌ ಮಟ್ಟಣ್ಣನವರ್‌ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.

ಗಿರೀಶ್‌ ಮಟ್ಟಣ್ಣನವರ್‌ ಹೇಳಿಕೆ ಸಂಬಂಧ ತನಿಖೆ ನಡೆಸುವಂತೆ ಆಗ್ರಹಿಸಿ ಬೆಂಗಳೂರಿನ ರಾಜಾಜಿನಗರ ಕಾವೇರಿ ಕೇದಾರನಾಥ ಅವರ ನೇತೃತ್ವದ ನಿಯೋಗಕ್ಕೆ ಇದೇ ವರ್ಷದ ಆಗಸ್ಟ್‌ ೨೯ರಂದು ರಾಜ್ಯ ಮಹಿಳಾ ಆಯೋಗಕ್ಕೆ ದೂರನ್ನು ಸಲ್ಲಿಸಿತ್ತು.

ಆದರೆ ದೂರು ಸಲ್ಲಿಕೆಯಾದರೂ ಮಹಿಳಾ ಆಯೋಗ ಮಟ್ಟಣ್ಣನವರ್‌ ಕೊಟ್ಟಿದ್ದ ಹೇಳಿಕೆ ಸಂಬಂಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ, ತನಿಖೆಯನ್ನೂ ನಡೆಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಾವೇರಿ ಕೇದಾರನಾಥ ಅವರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇವರ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರಿದ್ದ ಪೀಠ ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ಮಹಿಳಾ ಆಯೋಗಕ್ಕೆ ಸೂಚಿಸಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರತಿಕ್ಷಣ Exclusive: ಲೆಕ್ಸಿಂಗ್‌ಟನ್‌ ಆಸ್ಪತ್ರೆ ವಿರುದ್ಧ ತನಿಖಾ ವರದಿ ಸಲ್ಲಿಕೆ, ಇನ್ನೂ ಬಂದಿಲ್ಲ ಎಂದ DHO ಕಚೇರಿ..! ಸುಳ್ಳು ಹೇಳ್ತಿರೋದು ಯಾರು..?

ಬೆಂಗಳೂರಿನ ರಾಜಾಜಿನಗರದಲ್ಲಿರುವ ಖಾಸಗಿ ಆಸ್ಪತ್ರೆ ಕೆಪಿಎಂಇ ನಿಯಮಗಳನ್ನು ಉಲ್ಲಂಘಿಸಿ ನಡೆಯುತ್ತಿದೆ ಎಂಬ...

ಪ್ರಧಾನಿ ಮೋದಿ ಸರ್ಕಾರಕ್ಕೆ ಲೋಕಸಭೆಯಲ್ಲೇ ಸೋಲು – ಮೀಸಲಾತಿ ಮಸೂದೆ ತಿರಸ್ಕಾರ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ...

ಬ್ರಿಟನ್‌ ಪೌರತ್ವ: ರಾಹುಲ್‌ ಗಾಂಧಿ ವಿರುದ್ಧ FIR ದಾಖಲಿಸಿ ತನಿಖೆಗೆ ಸೂಚನೆ

ಭಾರತದ ಪೌರತ್ವದ ಜೊತೆಗೆ ಬ್ರಿಟನ್‌ನ ಪೌರತ್ವವನ್ನು ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ...

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವನಪರ್ಯಂತ ಜೈಲು – ಕೋರ್ಟ್‌ ತೀರ್ಪು

ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ....