ಗೋವಾದಲ್ಲಿ ನಡೆದ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ (Goa ZP Election Results) ಬಿಜೆಪಿ (BJP) ಮತ್ತು ಮೈತ್ರಿಕೂಟ ಮೇಲುಗೈ ಸಾಧಿಸಿದೆ. ಕಳೆದ ಬಾರಿಗೆ ಹೋಲಿಸಿದ್ರೆ ಈ ಬಾರಿ ಕಾಂಗ್ರೆಸ್ (Congress) ತನ್ನ ಹಿಡಿತ ಬಿಗಿಗೊಳಿಸಿದೆ.
29 ಜಿಲ್ಲಾ ಪಂಚಾಯತ್ ಸ್ಥಾನಗಳಲ್ಲಿ ಬಿಜೆಪಿ ಗೆದ್ದರೆ, ಬಿಜೆಪಿ ಮಿತ್ರಪಕ್ಷವಾಗಿರುವ MGP 3ರಲ್ಲಿ ಗೆದ್ದಿದೆ. ಈ ಮೂಲಕ ಎನ್‌ಡಿಎ 32 ಸ್ಥಾನಗಳನ್ನು ಗೆದ್ದುಕೊಂಡಿದೆ.
ಕಾಂಗ್ರೆಸ್ 10 ಸ್ಥಾನಗಳಲ್ಲಿ, ಕಾಂಗ್ರೆಸ್ ಮಿತ್ರಪಕ್ಷ GFP 1ರಲ್ಲಿ ಗೆದ್ದಿದೆ. ಈ ಮೂಲಕ ಕಾಂಗ್ರೆಸ್ ಮೈತ್ರಿಕೂಟ 11ರಲ್ಲಿ ಗೆದ್ದಿದೆ.
RGP 2ರಲ್ಲಿ, ಆಮ್ ಆದ್ಮಿ ಪಕ್ಷ 1ರಲ್ಲಿ, ಪಕ್ಷೇತರ ಅಭ್ಯರ್ಥಿಗಳು 4 ಸ್ಥಾನಗಳಲ್ಲಿ ಗೆದ್ದಿದ್ದಾರೆ.
ಕಳೆದ ಚುನಾವಣೆಯಲ್ಲಿ ಬಿಜೆಪಿ 33 ಜಿಲ್ಲಾ ಪಂಚಾಯತ್ ಸ್ಥಾನಗಳನ್ನು ಗೆದ್ದುಕೊಂಡಿತ್ತು. ಕಾಂಗ್ರೆಸ್ 4 ಸ್ಥಾನಗಳನ್ನಷ್ಟೇ ಗೆದ್ದುಕೊಂಡಿತ್ತು. ಆ ಹಿನ್ನೆಲೆಯಲ್ಲಿ ಬಿಜೆಪಿ ಈಗಲೂ ಅತೀ ಹೆಚ್ಚು ಸ್ಥಾನಗಳನ್ನು ಗೆದ್ದ ಖುಷಿಯಲ್ಲಿದ್ದರೆ, ಸ್ಥಾನಗಳ ಸಂಖ್ಯೆ ಹೆಚ್ಚಿಸಿಕೊಂಡ ಕಾರಣಕ್ಕೆ ಈ ಚುನಾವಣಾ ಫಲಿತಾಂಶ ಕಾಂಗ್ರೆಸ್ ಸಮಾಧಾನವನ್ನು ನೀಡಿದೆ.


