ಕರ್ನಾಟಕ ಲೋಕಾಯುಕ್ತ (Karnataka Lokayukta) ಪೊಲೀಸರು ಮಂಗಳವಾರ ಬೆಳಗ್ಗೆ ನಾಲ್ವರು ಸರ್ಕಾರಿ ಅಧಿಕಾರಿಗಳಿಗೆ ಆಘಾತ ನೀಡಿದ್ದಾರೆ.
ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಾಲ್ವರು ಅಧಿಕಾರಿಗಳ ಕಚೇರಿ, ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.
ಬಾಗಲಕೋಟೆ ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ಯಾಮ್‌ಸುಂದರ್ ಕಾಂಬ್ಳೆ, ವಿಜಯಪುರ ಜಿಲ್ಲೆಯ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಪ್ಪ, ಸಿದ್ದಾಪುರದಲ್ಲಿರುವ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಾರುತಿ ಯಶ್ವಂತ್ ಮಾಲ್ವಿ, ರಾಯಚೂರು ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಿಜಯಲಕ್ಷ್ಮೀಗೆ ಸೇರಿದ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.


