ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಡಿಜಿಪಿ ಡಾ.ರಾಮಚಂದ್ರ ರಾವ್ ಹತ್ತು ದಿನಗಳ ಕಾಲ ರಜೆ ಹಾಕಿ ಅಜ್ಞಾತ ಸ್ಥಳಕ್ಕೆ ತೆರಳಿ, ಕಾನೂನು ಹೋರಾಟಕ್ಕೆ ಸಜ್ಜಾಗಿದ್ದಾರೆ ಎನ್ನಲಾಗಿದೆ.
ಈ ಕುರಿತು ಈಗಾಗಲೇ ವಕೀಲರೊಂದಿಗೆ ರಾವ್ ಚರ್ಚೆ ರಾವ್ ನಡೆಸುತ್ತಿದ್ದಾರೆ ಎನ್ನಲಾಗಿದೆ. ಇನ್ನು ಈ ವಿಡಿಯೋ ಪೊಲೀಸ್ ಇಲಾಖೆಗೆ ಮುಜುಗರ ಉಂಟುಮಾಡಿದ್ದು, ಈ ಕುರಿತಾಗಿ ರಾಜ್ಯ ಸರ್ಕಾರ ಡಿಜಿಪಿ ರಾಮಚಂದ್ರ ರಾವ್ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.
ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ
ಈ ಬಗ್ಗೆ ವಿಚಾರಣೆ ಮಾಡಿಸಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಕೆಟ್ಟ ಕೆಲಸ ಮಾಡಿದವರು ಎಂಥಹಾ ದೊಡ್ಡ ವ್ಯಕ್ತಿಗಳಾಗಿದ್ದರೂ ಕೂಡ ಖಂಡಿತಾ ಅವರ ಮೇಲೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಬೆಳಗ್ಗಿನಿಂದಲೂ ಡಿಜಿಪಿ ರಾಮಚಂದ್ರ ರಾವ್ ಕೆಲ ಮಹಿಳೆಯರೊಂದಿಗೆ ಕಚೇರಿಯಲ್ಲೇ ರಾಸಲೀಲೆಯಲ್ಲಿ ತೊಡಗಿರುವ ವಿಡಿಯೋವೊಂದು ವೈರಲ್ ಆಗಿತ್ತು. ಈ ಕುರಿತು ಪ್ರತಿಕ್ರಿಯಿಸಿದ್ದ ಡಿಜಿಪಿ ರಾವ್, ಇದು ಎಐ ವಿಡಿಯೋ ಆಗಿದ್ದು, ನನಗೂ ಈ ವಿಡಿಯೋಗೂ ಯಾವುದೇ ಸಂಬಂಧವಿಲ್ಲ ಎಂದಿದ್ದರು.


