ಪ್ರಧಾನಿ ಮೋದಿ ಸರ್ಕಾರಕ್ಕೆ ಲೋಕಸಭೆಯಲ್ಲೇ ಸೋಲು – ಮೀಸಲಾತಿ ಮಸೂದೆ ತಿರಸ್ಕಾರ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಭಾರೀ ಸೋಲಾಗಿದೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಸಂಬಂಧ ಮಂಡಿಸಲಾಗಿದ್ದ ಸಂವಿಧಾನಿಕ ತಿದ್ದುಪಡಿ ಮಸೂದೆಗೆ ಸೋಲಾಗಿದೆ.

ಲೋಕಸಭೆಯಲ್ಲಿ ಹಾಜರಿದ್ದ 528 ಸಂಸದರ ಪೈಕಿ 298 ಮಂದಿ ಸಂಸದರು ಮಸೂದೆಯ ಪರವಾಗಿ ಮತ ಚಲಾಯಿಸಿದರೆ, 230 ಸಂಸದರು ಮಸೂದೆಯ ವಿರುದ್ಧ ಮತ ಚಲಾಯಿಸಿದರು.

ಸಂವಿಧಾನಿಕ ತಿದ್ದುಪಡಿ ಮಸೂದೆಯಾಗಿದ್ದ ಕಾರಣ ಮಸೂದೆ ಅಂಗೀಕಾರಕ್ಕೆ ಲೋಕಸಭೆ ಮತ್ತು ರಾಜ್ಯಸಭೆ ಎರಡಲ್ಲೂ ಮತದಾನದ ವೇಳೆ ಹಾಜರಿರುವ ಒಟ್ಟು ಸಂಸದರ ಪೈಕಿ ಮೂರನೇ ಎರಡರಷ್ಟು ಸಂಸದರು ಮಸೂದೆಯ ಪರವಾಗಿ ಮತ ಹಾಕುವುದು ಅನಿವಾರ್ಯ.

ಆದರೆ ಪ್ರಧಾನಿ ಮೋದಿ ಸರ್ಕಾರ ನಿನ್ನೆ ಮತ್ತು ಇವತ್ತು ಎರಡು ದಿನಗಳ ವಿಶೇಷ ಅಧಿವೇಶನ ಮೂಲಕ ಮಸೂದೆಗೆ ಅನುಮೋದನೆ ಪಡೆಯಲು ನಡೆಸಿದ ಯತ್ನ ವಿಫಲವಾಗಿದೆ.

ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ವಿರುದ್ಧ ವಿಪಕ್ಷಗಳು ತಮ್ಮ ಒಗ್ಗಟ್ಟಿನ ಶಕ್ತಿ ಪ್ರದರ್ಶಿಸಿವೆ.

ವಿಚಿತ್ರ ಎಂದರೆ ಮಹಿಳಾ ಮೀಸಲಾತಿಗೆ ಸಂಬಂಧಿಸಿದ ಸಂವಿಧಾನಿಕ ತಿದ್ದುಪಡಿ ಮಸೂದೆ ಮೇಲೆ ನಿನ್ನೆ ಮತ್ತು ಇವತ್ತು ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಈ ಹಿಂದೆ ಸಂಸತ್ತಿನಿಂದ ಅಂಗೀಕಾರಗೊಂಡಿದ್ದ ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ವಿಧೇಯಕವನ್ನು ನಿನ್ನೆಯಿಂದಲೇ ಜಾರಿಗೊಳಿಸಿ ಕೇಂದ್ರ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರತಿಕ್ಷಣ Exclusive: ಲೆಕ್ಸಿಂಗ್‌ಟನ್‌ ಆಸ್ಪತ್ರೆ ವಿರುದ್ಧ ತನಿಖಾ ವರದಿ ಸಲ್ಲಿಕೆ, ಇನ್ನೂ ಬಂದಿಲ್ಲ ಎಂದ DHO ಕಚೇರಿ..! ಸುಳ್ಳು ಹೇಳ್ತಿರೋದು ಯಾರು..?

ಬೆಂಗಳೂರಿನ ರಾಜಾಜಿನಗರದಲ್ಲಿರುವ ಖಾಸಗಿ ಆಸ್ಪತ್ರೆ ಕೆಪಿಎಂಇ ನಿಯಮಗಳನ್ನು ಉಲ್ಲಂಘಿಸಿ ನಡೆಯುತ್ತಿದೆ ಎಂಬ...

ಬ್ರಿಟನ್‌ ಪೌರತ್ವ: ರಾಹುಲ್‌ ಗಾಂಧಿ ವಿರುದ್ಧ FIR ದಾಖಲಿಸಿ ತನಿಖೆಗೆ ಸೂಚನೆ

ಭಾರತದ ಪೌರತ್ವದ ಜೊತೆಗೆ ಬ್ರಿಟನ್‌ನ ಪೌರತ್ವವನ್ನು ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ...

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವನಪರ್ಯಂತ ಜೈಲು – ಕೋರ್ಟ್‌ ತೀರ್ಪು

ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ....

ಕರ್ನಾಟಕದ ಲೋಕಸಭಾ ಸ್ಥಾನಗಳ ಸಂಖ್ಯೆ ಹೆಚ್ಚಳ, ಆದರೆ ಪ್ರಾತಿನಿಧ್ಯ ಇಳಿಕೆ..!

ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆಯಿಂದಾಗಿ ಕರ್ನಾಟಕದಲ್ಲೂ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಹೆಚ್ಚಳವಾಗಲಿದೆ. ಲೋಕಸಭಾ...