ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದು, ಗುರುವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಹಾಸನ ಸೇರಿದಂತೆ ಪಶ್ಚಿಮಘಟ್ಟ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.