ಮೊಘಲ್ ದೊರೆ ಔರಂಗಜೇಬ್ ಸಮಾಧಿ ಭೇಟಿಯನ್ನು 5 ದಿನಗಳ ಕಾಲ ನಿಷೇಧಿಸಲಾಗಿದೆ ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.
ಔರಂಗಜೇಬ್ ಸಮಾಧಿಯ ಅವಶ್ಯಕತೆ ಬಗ್ಗೆ ಪ್ರಶ್ನಿಸಿರುವ ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್ಎಸ್) ನಾಯಕರು, ಸಮಾಧಿಯನ್ನು ನೆಲಸಮ ಮಾಡಬೇಕು ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಭದ್ರತೆಯನ್ನು ಹೆಚ್ಚಿಸಲಾಗಿದೆ.
The tomb of Mughal emperor Aurangzeb will remain closed for 5 days to ensure that the law and order situation in the state does not get affected: Maharashtra Deputy CM Ajit Pawar pic.twitter.com/rSFn2Jfzh9
— ANI (@ANI) May 19, 2022
ಸಮಾಧಿ ಸ್ಥಳಕ್ಕೆ ಇತ್ತೀಚೆಗೆ ಎಐಎಂಐಎಂ ಮುಖಂಡ ಅಕ್ಬರುದ್ದೀನ್ ಒವೈಸಿ ಭೇಟಿ ನೀಡಿದ್ದನ್ನು ಶಿವಸೇನಾ ಟೀಕಿಸಿತ್ತು. ರಾಜ್ ಠಾಕ್ರೆ ನೇತೃತ್ವದ ಎಂಎನ್ಎಸ್ ಕೂಡ ಅಸಮಾಧಾನ ವ್ಯಕ್ತಪಡಿಸಿತ್ತು.
ಮಹಾರಾಷ್ಟ್ರದಲ್ಲಿ ಔರಂಗಜೇಬ್ ಸಮಾಧಿಯ ಅವಶ್ಯಕತೆ ಏನಿದೆ? ಅದನ್ನು ನೆಲಸಮ ಮಾಡಬೇಕು. ಹಾಗೆ ಮಾಡಿದರೆ ಜನರು ಅಲ್ಲಿಗೆ ಹೋಗುವುದಿಲ್ಲ ಎಂದು ಎಂಎನ್‌ಎಸ್ ವಕ್ತಾರ ಗಜಾನನ್ ಕಾಳೆ ಇತ್ತೀಚೆಗೆ ಟ್ವೀಟ್ ಮಾಡಿದ್ದರು.
ಇದಾದ ಬಳಿಕ ಪುರಾತತ್ವ ಇಲಾಖೆಯಡಿ ರಕ್ಷಣೆಯಲ್ಲಿರುವ ಸಮಾಧಿ ಸ್ಥಳ ಖುಲ್ತಬಾದ್‌ಗೆ ಕೆಲವರು ಬೀಗ ಹಾಕುವ ಪ್ರಯತ್ನ ನಡೆಸಿದ್ದಾರೆ.