ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ವರ್ಷಕ್ಕೆ 59 ಸಾವಿರ ಕೋಟಿ ರೂಪಾಯಿ ಖರ್ಚಾಗಲಿದೆ.
ಗ್ಯಾರಂಟಿ ಯೋಜನೆಗಳ ಜಾರಿ ಘೋಷಣೆ ಬಳಿಕ ಇದೇ ಮೊದಲ ಬಾರಿಗೆ ಸಿಎಂ ಅವರು ಯೋಜನೆಗೆ ತಗಲುವ ವಾರ್ಷಿಕ ವೆಚ್ಚದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ನಮ್ಮ ಸರ್ಕಾರ ಎಲ್ಲ ವರ್ಗದವರ ಪರವಾಗಿದೆ. ಹಿಂದೆ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದೆವು.
ಇದೀಗ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದಕ್ಕೆ ಸುಮಾರು 59,000 ಕೋಟಿ ರೂ. ವಾರ್ಷಿಕ ವೆಚ್ಚವಾಗಲಿದೆ