ADVERTISEMENT
ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಸಿಹಿ ಸುದ್ದಿ ನೀಡಿದೆ.
ಆಗಸ್ಟ್ 1ರಿಂದ ಏಳನೇ ವೇತನ ಆಯೋಗದ ವರದಿ ಜಾರಿಯಾಗಲಿದೆ.
ಇವತ್ತು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
7ನೇ ವೇತನ ಆಯೋಗವು ಶೇ 27.5 ವೇತನ ಪರಿಷ್ಕರಣೆಗೆ ಶಿಫಾರಸು ಮಾಡಿತ್ತು. ಮಾರ್ಚ್ 2023 ರಿಂದಲೇ ಶೇ.17 ಮಧ್ಯಂತರ ಪರಿಹಾರ ನೀಡಲಾಗಿದ್ದು, ಇನ್ನು ಗರಿಷ್ಠ ಶೇ 10.5 ವೇತನ ಹೆಚ್ಚಳ ಆಗಬೇಕಿದ್ದು, ಇದರಿಂದ ಬೊಕ್ಕಸಕ್ಕೆ ಸುಮಾರು 7,500 ಕೋಟಿ ರೂ. ಹೆಚ್ಚುವರಿ ಹೊರೆ ಬೀಳುವ ನಿರೀಕ್ಷೆಯಿದೆ.
ADVERTISEMENT