ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ ನಡೆದಿರುವ ಅಮಾನವೀಯ ಎಂಟು ಜನರ ಸಜೀವ ದಹನ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ಕೋಲ್ಕತ್ತಾ ಹೈಕೋರ್ಟ್ ಆದೇಶ ಹೊರಡಿಸಿದೆ.
ಸದ್ಯ ಎಸ್ ಐಟಿ ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಏಪ್ರಿಲ್ 7ರೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಪ್ರಕರಣದಲ್ಲಿ ಬಂಧಿತರಾದವರು ಹಾಗೂ ಸಂಬಂಧಿಸಿದ ಕಾಗದ ಪತ್ರಗಳನ್ನು ಪಶ್ಚಿಮ ಬಂಗಾಳ ಸರ್ಕಾರ ರಚಿಸಿರುವ ಎಸ್ ಐಟಿ ಸಿಬಿಐಗೆ ಹಸ್ತಾಂತರಿಸುವಂತೆ ಹೈಕೋರ್ಟ್ ಸೂಚಿಸಿದೆ.
ಟಿಎಂಸಿಯ ಗ್ರಾಮ ಪಂಚಾಯತ್ ಸದಸ್ಯನೊಬ್ಬ ಮೃತಪಟ್ಟ ನಂತರ ಬೊಗ್ಟುಯಿ ಗ್ರಾಮದಲ್ಲಿ ನಡೆದಿರುವ ಹತ್ಯೆ ಪ್ರಕರಣದ ಬಗ್ಗೆ ಬುಧವಾರ ಕೋಲ್ಕತ್ತಾ ಹೈಕೋರ್ಟ್ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಈ ಪ್ರಕರಣದಲ್ಲಿ ಇಲ್ಲಿಯವರೆಗೂ ಸುಮಾರು 11 ಮಂದಿಯನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಪೊಲೀಸ್ ಮಹಾನಿರ್ದೇಶಕ ಮನೋಜ್ ಮಾಳವೀಯಾ ತಿಳಿಸಿದ್ದಾರೆ.
https://youtu.be/3-vx3KZ_1JA