9ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.
ಬಾಲಕಿಯನ್ನ ಪುಸಲಾಯಿಸಿ ಸಾಮೂಹಿಕ ಅತ್ಯಾಚಾರವೆಸಗಿರುವ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈಗಾಗಲೇ ಪೊಲೀಸರು ವಿದ್ಯಾರ್ಥಿನಿ ಹೇಳಿಕೆ ಪಡೆದಿದ್ದಾರೆ. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.