ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಒಂದೇ ಕುಟುಂಬದ 9 ಜನ ಸಾವನ್ನಪ್ಪಿರುವ ಘಟನೆ ಸೋಮವಾರ ವರದಿಯಾಗಿದೆ. ಕುಟುಂಬಸ್ಥರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಸಾಂಗ್ಲಿ ಜಿಲ್ಲೆ ಮೈಶಾಲ್ ನ ಮನೆಯಲ್ಲಿ 9 ಮೃತದೇಹಗಳು ಪತ್ತೆಯಾಗಿವೆ.
ಮನೆಯಲ್ಲಿ 9 ಮೃತದೇಹಗಳು ಪತ್ತೆಯಾಗಿವೆ. 3 ದೇಹಗಳು ಒಂದೇ ಸ್ಥಳದಲ್ಲಿ ಪತ್ತೆಯಾದರೆ, ಇನ್ನೂ 6 ಮೃತದೇಹಗಳು ಬೇರೆ ಬೇರೆ ಸ್ಥಳದಲ್ಲಿ ಪತ್ತೆಯಾಗಿವೆ ಎಂದು ಸಾಂಗ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಕ್ಷಿತ್ ಗಡಮ್ ಹೇಳಿದ್ದಾರೆ.
ಇದು ಆತ್ಮಹತ್ಯೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪೊಲೀಸರು ಸ್ಥಳದಲ್ಲಿದ್ದಾರೆ. ಈ ಪ್ರಕರಣದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಇನ್ನೊಬ್ಬ ಪೊಲೀಸ್ ಅಧಿಕಾರಿ ಈ ಬಗ್ಗೆ ಮಾತನಾಡಿದ್ದು, ಮೇಲ್ನೋಟಕ್ಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪೂರ್ಣ ಮಾಹಿತಿಗಾಗಿ ಪೋಸ್ಟ್ ಮಾರ್ಟಂ ವರದಿಗಾಗಿ ಕಾಯಬೇಕು ಎಂದು ಹೇಳಿದ್ದಾರೆ.