ದೀಪಾವಳಿ ಮೊದಲ ದಿನವೇ ಕರ್ನಾಟಕಕ್ಕೆ ಪ್ರಧಾನಿ ಮೋದಿ ಅವಕೃಪೆ

ದೀಪಾವಳಿ (Deepavali) ಹಬ್ಬದ ಮೊದಲ ದಿನ ಇವತ್ತು ಲಕ್ಷ್ಮೀ ದೇವಿಯ ಆರಾಧನೆಯ ದಿನ. ದೀಪಾವಳಿಯ ಮೊದಲ ದಿನವೇ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಸರ್ಕಾರ ಕರ್ನಾಟಕಕ್ಕೆ (Karnataka) ಅವಕೃಪೆ ತೋರಿಸಿದೆ.

ಮಳೆಯಿಂದ ಉಂಟಾಗಿರುವ ಹಾನಿ ಹಿನ್ನೆಲೆಯಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರಕ್ಕೆ ರಾಜ್ಯ ವಿಪತ್ತು ಪರಿಹಾರ ನಿಧಿಯಡಿಯಲ್ಲಿ (SDRF) ಕೇಂದ್ರ ಸರ್ಕಾರ ತನ್ನ ಪಾಲನ್ನು ಬಿಡುಗಡೆ ಮಾಡಿದೆ.

(ಪ್ರತಿಕ್ಷಣ ಸುದ್ದಿಗಾಗಿ ವಾಟ್ಸಾಪ್‌ ನಂಬರ್‌ 97411 83147 ಅಥವಾ pratikshananews@gmail.com ನ್ನು ಸಂಪರ್ಕಿಸಿ)

ಒಟ್ಟು 1,950 ಕೋಟಿ ರೂಪಾಯಿ ಮೊತ್ತದ ಪರಿಹಾರ ಬಿಡುಗಡೆಗೆ ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವರೂ ಆಗಿರುವ ಅಮಿತ್‌ ಶಾ (Union Home Minister Amit Sha) ಅವರು ಅನುಮೋದನೆ ನೀಡಿದ್ದಾರೆ.

ಈ 1,950 ಕೋಟಿ ರೂಪಾಯಿ ಪರಿಹಾರದಲ್ಲಿ ಕರ್ನಾಟಕಕ್ಕೆ ಸಿಗುವುದು ಮಾತ್ರ 348 ಕೋಟಿ ರೂ. ಬಿಜೆಪಿ ಆಡಳಿತವಿರುವ ಪಕ್ಕದ ಮಹಾರಾಷ್ಟ್ರಕ್ಕೆ ಬರೋಬ್ಬರೀ 1,566 ಕೋಟಿ ರೂಪಾಯಿ ಬಿಡುಗಡೆಯಾಗಿದೆ.

ಈ ಹಣವನ್ನು ಪ್ರವಾಹ, ಭೂ ಕುಸಿತ ಮತ್ತು ಮೇಘಸ್ಫೋಟದಿಂದ ಆಗಿರುವ ಹಾನಿಯ ಪರಿಹಾರಕ್ಕೆ ಬಳಸಿಕೊಳ್ಳುವಂತೆ ಸೂಚಿಸಲಾಗಿದೆ.

ಈ ವರ್ಷ ಕೇಂದ್ರ ಸರ್ಕಾರ 27 ರಾಜ್ಯಗಳಿಗೆ ರಾಜ್ಯ ವಿಪತ್ತು ಪರಿಹಾರ ನಿಧಿಯಡಿಯಲ್ಲಿ 13,603 ಕೋಟಿ ರೂಪಾಯಿ ಮತ್ತು ಕೇಂದ್ರ ವಿಪತ್ತು ಪರಿಹಾರ ನಿಧಿಯಡಿಯಲ್ಲಿ (NDRF) 15 ರಾಜ್ಯಗಳಿಗೆ 2,189 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.

ಇದಲ್ಲದೇ ರಾಜ್ಯ ವಿಪತ್ತು ತಡೆ ನಿಧಿಯಡಿಯಲ್ಲಿ (SDMF) 21 ರಾಜ್ಯಗಳಿಗೆ 4,571 ಕೋಟಿ ರೂಪಾಯಿ ಮತ್ತು ರಾಷ್ಟ್ರೀಯ ವಿಪತ್ತು ತಡೆ ನಿಧಿಯಡಿಯಲ್ಲಿ (NDMF) 9 ರಾಜ್ಯಗಳಿಗೆ 372 ಕೋಟಿ ರೂಪಾಯಿ ಬಿಡುಗಡೆ ಮಾಡಿತ್ತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರಧಾನಿ ಮೋದಿ ಸರ್ಕಾರಕ್ಕೆ ಲೋಕಸಭೆಯಲ್ಲೇ ಸೋಲು – ಮೀಸಲಾತಿ ಮಸೂದೆ ತಿರಸ್ಕಾರ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ...

ಬ್ರಿಟನ್‌ ಪೌರತ್ವ: ರಾಹುಲ್‌ ಗಾಂಧಿ ವಿರುದ್ಧ FIR ದಾಖಲಿಸಿ ತನಿಖೆಗೆ ಸೂಚನೆ

ಭಾರತದ ಪೌರತ್ವದ ಜೊತೆಗೆ ಬ್ರಿಟನ್‌ನ ಪೌರತ್ವವನ್ನು ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ...

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವನಪರ್ಯಂತ ಜೈಲು – ಕೋರ್ಟ್‌ ತೀರ್ಪು

ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ....

ಕರ್ನಾಟಕದ ಲೋಕಸಭಾ ಸ್ಥಾನಗಳ ಸಂಖ್ಯೆ ಹೆಚ್ಚಳ, ಆದರೆ ಪ್ರಾತಿನಿಧ್ಯ ಇಳಿಕೆ..!

ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆಯಿಂದಾಗಿ ಕರ್ನಾಟಕದಲ್ಲೂ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಹೆಚ್ಚಳವಾಗಲಿದೆ. ಲೋಕಸಭಾ...