ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಬೆದರಿಕೆಯೊಡ್ಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಕೇಸ್ ನಲ್ಲಿ ಜೈಲು ಸೇರಿದ್ದ ಆರೋಪಿ, ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಬ್ಯಾನರ್ ತೆರವುಗೊಳಿಸದ ವಿಚಾರವಾಗಿ, ಪೌರಾಯುಕ್ತೆ ಅಮೃತಾ ಗೌಡಗೆ ಫೋನ್ ಕರೆ ಮಾಡಿ ಧಮಕಿ ಹಾಕಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ ರಾಜೀವ್ ಗೌಡ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.
ಈತನ ವಿರುದ್ಧ ರಾಜ್ಯಾದ್ಯಂತ ತೀವ್ರ ಆಕ್ರೋಶ ಹಾಗೂ ಪ್ರತಿಭಟನೆಗಳೂ ನಡೆದಿದ್ವು. ಪ್ರಕರಣ ತೀವ್ರತೆ ತಿಳಿಯುತ್ತಿದ್ದಂತೆ ಆರೋಪಿ ರಾಜೀವ್ ಗೌಡ ಪರಾರಿಯಾಗಿ ಮಂಗಳೂರಿನ ಉದ್ಯಮಿಯೊಬ್ಬರಲ್ಲಿ ಆಶ್ರಯ ಪಡೆದುಕೊಂಡಿದ್ದ.
ಹೀಗೆ, ಬರೋಬ್ಬರಿ 14 ದಿನಗಳ ಕಾಲ ತಲೆ ಮರೆಸಿಕೊಂಡಿದ್ದ ಆರೋಪಿಯನ್ನ ಬಂಧಿಸಿದ್ದ ಪೊಲೀಸರು, ಇಂದು ಶಿಡ್ಲಘಟ್ಟ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ರು.
ಇದೀಗ ನ್ಯಾಯಾಲಯ ರಾಜೀವ್ ಗೌಡಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಜೊತೆಗೆ ಆರೋಪಿಗೆ 50 ಸಾವಿರ ರೂಪಾಯಿ ಶೂರಿಟಿ ಬಾಂಡ್ ಹಾಗೂ ಪ್ರಕರಣ ಕುರಿತಾಗಿ ಪೊಲೀಸರ ತನಿಖೆಗೆ ಸಹಕರಿಸಲು ಕೋರ್ಟ್ ಸೂಚನೆ ನೀಡಿದೆ.
ಇನ್ನು ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಈ ಪ್ರಕರಣದ ಆರೋಪಿಗೆ ಜಾಮೀನು ಸಿಕ್ಕ ಸಂತಸದಲ್ಲಿ ಆತನ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲೇಬಾರದು ಅಂತ ನ್ಯಾಯಮೂರ್ತಿಗಳು ತಾಕೀತು ಮಾಡಿದ್ರು.


