ಭಾರತ ಮಾತೆ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದ ಎಐಎಂಐಎಂ ರಾಜ್ಯಾಧ್ಯಕ್ಷ ಉಸ್ಮಾನಗಣಿ ಹುಮನಾಬಾದ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಇತ್ತೀಚೆಗೆ ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದಲ್ಲಿ ನಡೆದಿದ್ದ ಡಾ.ಎಪಿಜೆ ಅಬ್ದುಲ್ ಕಲಾಂ ವೃತ್ತ ಉದ್ಘಾಟನೆ ಕಾರ್ಯಕ್ರದಲ್ಲಿ ಉಸ್ಮಾನಗಣಿ ಹುಮನಾಬಾದ್, ‘ಭಾರತ ಮಾತೆ ತಾಯಿ’ ಎನ್ನುವ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ.
ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಘಟನೆ ಬೆನ್ನಲ್ಲೆ, ಉಸ್ಮಾನಗಣಿ ಹುಮ್ನಾಬಾದ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮೂಲಕ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಉಸ್ಮಾನಗಣಿ ಕ್ಷಮೆಯಾಚಿಸುವಂತೆ ಆಗ್ರಹ ವ್ಯಕ್ತವಾಗಿತ್ತು. ಪೊಲೀಸರು ಈ ಬಗ್ಗೆ ಎಫ್ಐಆರ್ ದಾಖಲಿಸಿಕೊಂಡಿದ್ದರು. ಈ ವೇಳೆ ಉಸ್ಮಾನಗಣಿ ತಲೆಮರೆಸಿಕೊಂಡಿದ್ದ.
ಸುಳಿವಿನ ಮೇರೆಗೆ ಪೊಲೀಸರು ಆತನನ್ನು ಅಜ್ಞಾತ ಸ್ಥಳದಿಂದ ಬಂಧಿಸಿದ್ದಾರೆ. ದೂರು ದಾಖಲಿಸಿಕೊಂಡು ತನಿಖೆಗೆ ಇಳಿದ ಪೊಲೀಸರು ಉಸ್ಮಾನಗಣಿಯನ್ನು ಬಂಧಿಸಿದ್ದಾರೆ. ಬಳಿಕ ರಾತ್ರಿ ತಹಸೀಲ್ದಾರ್ ಬಸವರಾಜ್ ಮುಂದೆ ಹಾಜರುಪಡಿಸಿದ್ದಾರೆ. ಫೆ.9 ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದ್ದಾರೆ.