ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ 144 ಸೆಕ್ಷನ್ ಜಾರಿ ನಡುವೆಯೂ ಪ್ರತಿಭಟನೆ ನಡೆಸಿದ ವಿದ್ಯಾರ್ಥಿನಿಯರ ಮೇಲೆ ಎಫ್ಐಆರ್ ದಾಖಲಾಗಿದೆ.
ತುಮಕೂರಿನ ಎಂಪ್ರೆಸ್ ಪಿಯು ಕಾಲೇಜಿನ ಪ್ರಾಂಶುಪಾಲರು ನೀಡಿದ ದೂರಿನ ಮೇರೆಗೆ 15 ಮುಸ್ಲಿಂ ವಿದ್ಯಾರ್ಥಿನಿಯರ ಮೇಲೆ ತುಮಕೂರು ಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಫೆಬ್ರವರಿ 17ರಂದು ತುಮಕೂರಿನ ಎಂಪ್ರೆಸ್ ಪಿಯು ಕಾಲೇಜು ಮುಂದೆ ತರಗತಿಗೆ ಬಹಿಷ್ಕಾರ ಹಾಕಿದ ವಿದ್ಯಾರ್ಥಿನಿಯರು ನಾವು ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಬರುತ್ತೇವೆಂದು ಪ್ರತಿಭಟನೆ ನಡೆಸಿದ್ದರು. ಸದ್ಯ 144 ಸೆಕ್ಷನ್ ನಿಷೇಧಾಜ್ಞೆ ಜಾರಿ ಉಲ್ಲಂಘನೆ ಅಡಿಯಲ್ಲಿ ಐಪಿಸಿ ಸೆಕ್ಷನ್ 143, 145, 188, 149 ಅಡಿಯಲ್ಲಿ ಕೇಸ್ ದಾಖಲಾಗಿದೆ.