ಬೆಂಗಳೂರು ನಗರದ 20 ಸರ್ಕಾರಿ ಶಾಲೆಯ 100 ಮಕ್ಕಳು ಸೇರಿ ‘ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್’ ಹೆಸರಿನ ಉಪಗ್ರಹವನ್ನು ತಯಾರಿಸಿದ್ದಾರೆ. ಈ ಉಪಗ್ರಹ ಉಡಾವಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ ಉಡಾವಣೆ ಮಾಡುವಂತೆ ನಿರ್ಧಾರವನ್ನು ಕೈಗೊಂಡಿದೆ.
ಇಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಿನ್ನಲೆಯಲ್ಲಿ ಸುಮಾರು 1.90 ಕೋಟಿ ವೆಚ್ಚದ ವಿದ್ಯಾರ್ಥಿ ಉಪಗ್ರಹ ಉಡಾವಣೆ ಯೋಜನೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದಂತ ಅವರು, ಈ ವಿದ್ಯಾರ್ಥಿ ಉಪಗ್ರಹಕ್ಕೆ ನಟ ಪುನೀತ್ ರಾಜ್ ಕುಮಾರ್ ಹೆಸರಿಡಲಾಗಿದೆ. ಈ ಉಪಗ್ರಹವನ್ನು ಸೆಪ್ಟೆಂಬರ್ ಅಥವಾ ಅಕ್ಟೋಬರ್ ತಿಂಗಳಿನಲ್ಲಿ ಉಡಾವಣೆ ಮಾಡಲು ತೀರ್ಮಾನಿಸಲಾಗಿದೆ ಎಂದರು.
ವಿದ್ಯಾರ್ಥಿಗಳು ತಯಾಗಿಸಿರುವಂತ ಉಪಗ್ರಹಕ್ಕೆ ನಟ ಪುನೀತ್ ರಾಜ್ ಕುಮಾರ್ ಹೆಸರು ಇಡುವಂತ ಸಲಹೆ ಬಂದಿತ್ತು. ಈ ಹಿನ್ನಲೆಯಲ್ಲಿ ಅವರ ಹೆಸರಿಡಲಾಗಿದೆ. ಈ ಯೋಜನೆಯಡಿ ಬೆಂಗಳೂರಿನ 20 ಸರ್ಕಾರಿ ಶಾಲೆಯ 100 ಮಕ್ಕಳು ಭಾಗವಹಿಸಲಿದ್ದಾರೆ ಎಂದರು.