ಸರ್ಕಾರದ ಕೊರೋನಾ ನಿಯಮಗಳನ್ನು ನಿರ್ಲಕ್ಷಿಸಿ ಮೇಕೆದಾಟು ಪಾದಯಾತ್ರೆ ನಡೆಸುತ್ತಿರುವ ಆರೋಪದ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಸಂಸದ ಡಿ.ಕೆ. ಸುರೇಶ್ ಸೇರಿದಂತೆ 41 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ರಾಮನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಭಾನುವಾರ ಮೇಕೆದಾಟಿನಲ್ಲಿ ಕೊರೋನಾ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಎಫ್ಐಅರ್ ಹಾಕಲಾಗಿದೆ ಎಂದು ತಿಳಿದುಬಂದಿದೆ.
ಡಿಕೆಶಿ ಹಾಗು ಸಿದ್ದರಾಮಯ್ಯ ನೇತೃತ್ವದಲ್ಲಿ ರೇಷ್ಮೆನಗರಿ ರಾಮನಗರದಿಂದ 2ನೇ ಹಂತದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕೊರೋನಾ ನಿಮಯ ಉಲ್ಲಂಘನೆ ಆರೋಪ ದೂರು ದಾಖಲಾಗಿದ್ದು, ರಾಮನಗರ ತಹಶೀಲ್ದಾರ್ ದೂರು ನೀಡಿದ ಹಿನ್ನೆಲೆ ರಾಮನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಮೊದಲ ಹಂತದ ಮೇಕೆದಾಟು ಪಾದಯಾತ್ರೆಯಲ್ಲಿಯೂ ಕೊರೋನಾ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕರನ್ನು ಒಳಗೊಂಡಂತೆ ಪ್ರಮುಖರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು.