ನಟಿ ಅಮೂಲ್ಯ ಇಂದು ಬೆಳಗ್ಗೆ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಕ್ಕಳು ಹಾಗೂ ತಾಯಿ ಅಮೂಲ್ಯ ಅವರು ಆರೋಗ್ಯವಾಗಿದ್ದಾರೆ ಎಂದು ಅಮೂಲ್ಯ ಅವರ ಪತಿ ಜಗದೀಶ್ ಆರ್ ಚಂದ್ರ ಅಭಿಮಾನಿಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಇನ್ಸ್ಟಾಗ್ರಾಂನಲ್ಲಿ ಅಮೂಲ್ಯ ಅವರ ಪತಿ ಜಗದೀಶ್ ಆರ್ ಚಂದ್ರ ಈ ಸಂತೋಷದ ಸುದ್ದಿಯ ಬಗ್ಗೆ ಬರೆದುಕೊಂಡಿದ್ದಾರೆ. ದಂಪತಿಗಳ ಈ ಪಯಣದಲ್ಲಿ ಜತೆ ನಿಂತ ಎಲ್ಲರಿಗೂ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸಿದ್ದಾರೆ. ನಟಿ ಅಮೂಲ್ಯ ಅವರು ಜಯನಗರದ ಕ್ಲೈಡ್ ನೈಟ್ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ 11.45 ಕ್ಕೆ ಮಕ್ಕಳಿಗೆ ಜನ್ಮ ನೀಡಿದ್ದಾರೆ ಎನ್ನಲಾಗಿದೆ.
ಇನ್ನು, ನಟಿ ಆಶಿಕಾ ರಂಗನಾಥ್, ಅದ್ವಿತಿ ಶೆಟ್ಟಿ, ಹರ್ಷಿಕಾ ಪೂಣಚ್ಚ, ಸೋನು ಗೌಡ ಸೇರಿ ಹಲವಾರು ಸ್ಯಾಂಡಲ್ವುಡ್ ಮಂದಿ ಈ ಮುದ್ದಾದ ದಂಪತಿಗೆ ಹಾಗೂ ಅವರ ಮಕ್ಕಳಿಗೆ ಶುಭ ಹಾರೈಸಿದ್ದಾರೆ.