ನವಜೋತ್ ಸಿಂಗ್ ಸಿಧು ಕಾಂಗ್ರೆಸ್ನ ಪಂಜಾಬ್ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರು ಬಯಸಿದಂತೆ ನಾನು ರಾಜೀನಾಮೆ ನೀಡಿದ್ದೇನೆ ಎಂದು ಸಿಧು ಟ್ವೀಟ್ ಮಾಡಿದ್ದಾರೆ.
ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಹೀನಾಯ ಸೋಲಿನ ನಂತರ ಕಾಂಗ್ರೆಸ್ನ ರಾಷ್ಟ್ರೀಯ ನಿಯೋಜಿತ ಅಧ್ಯಕ್ಷೆ ಸೋನಿಯಾಗಾಂಧಿಯವರು, ಈ 5 ರಾಜ್ಯಗಳ ಕಾಂಗ್ರೆಸ್ ರಾಜ್ಯಾಧ್ಯಕ್ಷರಿಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವಂತೆ ಆಗ್ರಹಿಸಿದ್ದರು.
ಈ ಬೆನ್ನಲ್ಲೇ, ಪಂಜಾಬ್ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
As desired by the Congress President I have sent my resignation … pic.twitter.com/Xq2Ne1SyjJ
— Navjot Singh Sidhu (@sherryontopp) March 16, 2022
ಪಕ್ಷದ ಪ್ರಾದೇಶಿಕ ಸಮಿತಿಗಳ ಮರುಸಂಘಟನೆಗೆ ಅನುಕೂಲವಾಗುವಂತೆ ಸೋನಿಯಾ ಗಾಂಧಿ ಈ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಪಕ್ಷದ ರಾಷ್ಟ್ರೀಯ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದರು.
https://youtu.be/7R_IfHf4X3A