ಕರ್ನಾಟಕದಲ್ಲಿ ಇಂದಿನಿಂದ 3 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಶೇಷವಾಗಿ ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಮಳೆ ಅಬ್ಬರಿಸಲಿದೆ. ಇಂದಿನಿಂದ ಮಾರ್ಚ್ 28 ರ ವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಬೇಸಿಗೆಯಲ್ಲಿ ಜಾಸ್ತಿ ತಾಪಮಾನ ಉಂಟಾಗುವ ಸಾಧ್ಯತೆಯಿದೆ ಎಂದು ಅದು ತಿಳಿಸಿದೆ.ಮುಂದಿನ 3 ದಿನಗಳ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಮಹಾರಾಷ್ಟ್ರದ ಕರಾವಳಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕಕ್ಕೂ ಮಳೆಯ ಪರಿಣಾಮ ತಟ್ಟಲಿದೆ.
ರಾಜ್ಯದ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯಲ್ಲಿ ಮಾರ್ಚ್ 26 ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್ 27, 28ರಂದು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಗದಗ, ಹಾವೇರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಾರ್ಚ್ 28ರವರೆಗೆ ಮಳೆಯಾಗುವ ಸಾಧ್ಯತೆಯಿದೆ.