ಬಾಗಲಕೋಟೆ ಜಿಲ್ಲಾ ನ್ಯಾಯಾಲಯದಲ್ಲಿನ 54 ಖಾಲಿ ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ:
ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು ಹಾಗೂ ಸಿಪಾಯಿ
ಒಟ್ಟು ಹುದ್ದೆಗಳು: 54
ಹುದ್ದೆ ಹುದ್ದೆಗಳ ಸಂಖ್ಯೆ ವೇತನ ಶ್ರೇಣಿ –
ಶೀಘ್ರಲಿಪಿಗಾರರು ಗ್ರೇಡ್ 3 – 13 27650-52650
ಬೆರಳಚ್ಚುಗಾರರು 02 – 21400-42000
ಬೆರಳಚ್ಚು ನಕಲುಗಾರರು 01 – 21400-42000
ಆದೇಶ ಜಾರಿಕಾರರು 01 – 19950-37900
ಸಿಪಾಯಿ 37 – 17000-28950
ಶೈಕ್ಷಣಿಕ ಅರ್ಹತೆ
ಶೀಘ್ರಲಿಪಿಗಾರರು – ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಡಿಪ್ಲೋಮಾ ತೇರ್ಗಡೆಯಾಗಿರಬೇಕು. ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲಾದ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು & ಶೀಘ್ರಲಿಪಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಕಮರ್ಷಿಯಲ್ ಪ್ರ್ಯಾಕ್ಟಿಸ್ 3 ವರ್ಷಗಳ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಬೆರಳಚ್ಚುಗಾರರು – ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಡಿಪ್ಲೋಮಾ ತೇರ್ಗಡೆಯಾಗಿರಬೇಕು. ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲಾದ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಕಮರ್ಷಿಯಲ್ ಪ್ರ್ಯಾಕ್ಟಿಸ್ 3 ವರ್ಷಗಳ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಬೆರಳಚ್ಚು ನಕಲುಗಾರರು – ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾದ ಕಿರಿಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಆದೇಶ ಜಾರಿಕಾರರು – ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಸಿಪಾಯಿ ಹುದ್ದೆಗೆ – 10ನೇ ತರಗತಿಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕನ್ನಡ ಓದಲು, ಬರೆಯಲು ತಿಳಿದಿರಬೇಕು.
ವಯೋಮಾನ:
ಕನಿಷ್ಠ 18 ವರ್ಷ ಪೂರೈಸಿರಬೇಕು.
ಆಯ್ಕೆ ವಿಧಾನ :
ಆಯಾ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಸಂದರ್ಶನ
ಅರ್ಜಿ ಸಲ್ಲಿಕೆಯ ವಿಧಾನ : ಆನ್ಲೈನ್ ಮೂಲಕ
ಅರ್ಜಿ ಶುಲ್ಕ :
ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 300
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 150
ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ
ಶುಲ್ಕ ಪಾವತಿ ವಿಧಾನ: ಆನ್ ಲೈನ್ ಅಥವಾ ಬ್ಯಾಂಕ್ ಚಲನ್ ಮೂಲಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 21, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಏಪ್ರಿಲ್ 22, 2022
ಹೆಚ್ಚಿ ಮಾಹಿತಿಗಾಗಿ ಬಾಗಲಕೋಟೆ ಜಿಲ್ಲಾ ಅಂತರ್ಜಾಲ ತಾಣ https://districts.ecourts.gov.in/bagalkot-onlinerecruitment ಕ್ಕೆ ಭೇಟಿ ನೀಡಿ.